ವಾಜಪೇಯಿ ಪುಣ್ಯತಿಥಿ ಗಣ್ಯರ ನಮನ
ನವದೆಹಲಿ,ಅ.೧೬- ಇಂದು ಭಾರತ ರತ್ನ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅಟಲ್ ಬಿಹಾರಿ ಅವರ ಸ್ಮಾರಕ ಸದೈವ್ ಅಟಲ್ ಗೆ ಭೇಟಿ ನೀಡಿ ಅವರನ್ನು ಸ್ಮರಿಸಿ ಪುಷ್ಪ ನಮನ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪ್ರಧಾನಿಯಲ್ಲದೆ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪಾಧ್ಯಕ್ಷ ಜಗದೀಪ್ ಧನಖರ್ ,ರಕ್ಷಣಾ ಸಚಿವ ರಾಜನಾಥ್ ಸಿಂಗ್ ,ಲೋಕಸಭೆ ಸ್ಪೀಕರ್ ಓಂ ಬಿರ್ಲಾ,ಸೇರಿದಂತೆ ಹಲವು ನಾಯಕರು ಮಾಜಿ ಪ್ರಧಾನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡ ಪ್ರಧಾನಿ ಮೋದಿ, ಅಟಲ್ ಜಿ ಅವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ. ರಾಷ್ಟ್ರ ನಿರ್ಮಾಣದಲ್ಲಿ ಅವರ ಅನನ್ಯ ಕೊಡುಗೆಗಾಗಿ ಅಸಂಖ್ಯಾತ ಜನರು ಅವರನ್ನು ಸ್ಮರಿಸುತ್ತಾರೆ. ಅವರು ನಮ್ಮ ಸಹ ನಾಗರಿಕರು ಉತ್ತಮ ಗುಣಮಟ್ಟದ ಜೀವನವನ್ನು ಖಚಿತಪಡಿಸಿಕೊಳ್ಳಲು ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರು ಹಾದಿಯಲ್ಲಿ ನಾವು ಸಾಗಿ ಅವರ ಕೆಲಸ ಮುಂದುವರಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.
ಮಾಜಿ ಪ್ರಧಾನಮಂತ್ರಿ ಅಟಲ್‌ಬಿಹಾರಿ ವಾಜಪೇಯಿರವರ ಪುಣ್ಯತಿಥಿಯ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರಮೋದಿರವರು ವಾಜಪೇಯಿ ಸಮಾಧಿಗೆ ಪುಷ್ಪಗುಚ್ಛ ಇಟ್ಟು ನಮನ ಸಲ್ಲಿಸಿದರು. ಕೇಂದ್ರ ಸಚಿವ ರಾಜನಾಥ್‌ಸಿಂಗ್ iತ್ತಿತರರು ಇದ್ದಾರೆ.
ಮಾಜಿ ಪ್ರಧಾನಮಂತ್ರಿ ಎ.ಬಿ. ವಾಜಪೇಯಿರವರ ಪುಣ್ಯತಿಥಿಯ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮುರವರು ಸಮಾಧಿಗೆ ತೆರಳಿ ನಮನ ಸಲ್ಲಿಸಿದರು.