ಐದು ದಿನ ಭಾರೀ ಮಳೆ
ಬೆಂಗಳೂರು,ಅ.೧೩- ಇಂದಿನಿಂದ ಮುಂದಿನ ಐದು ದಿನಗಳ ಕಾಲ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ತೇವಾಂಶ ಭರಿತ ಮೋಡಗಳಿರುವ ಕಾರಣ ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹವಾಮಾನ ತಜ್ಞರ ಪ್ರಕಾರ ಕರಾವಳಿ, ಉತ್ತರ ಕರ್ನಾಟಕ ಮತ್ತು ಮಲೆನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದೆ.
ಇಂದು ಬೆಂಗಳೂರಿನಲ್ಲಿ ಮಳೆಯಾಗಿದೆ.
ನಾಳೆ ಬುಧವಾರ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಕೆಲವೆಡೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ ೧೫ ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ . ತುಮಕೂರು, ಮಂಡ್ಯ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಕೆಲವೆಡೆ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಶಿವಮೊಗ್ಗ, ತುಮಕೂರು, ವಿಜಯ ನಗರ, ಕೊಡಗು, ಹನಸ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಯಾದಗಿರಿ, ವಿಜಯಪುರ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಗದಗನಲ್ಲಿ ಒಣಹವೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.
ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ೩೦.೫ ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ ೧೯.೩ ಡಿಗ್ರಿ ಸೆಲ್ಸಿಯಸ್. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಿಷ್ಠ ತಾಪಮಾನ ೨೯.೭ ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ ೨೦.೧ ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ ಗರಿಷ್ಠ ತಾಪಮಾನ ೨೯.೮ ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ ಕನಿಷ್ಠ ತಾಪಮಾನ ೧೯.೦ ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.