ಕೆಎಸ್‌ಆರ್‌ಟಿಸಿಗೆ ಪ್ರಶಸ್ತಿ
ಬೆಂಗಳೂರು.ಆ.೧೨- ಕೆಎಸ್‌ಆರ್‌ಟಿಸಿ ನಿಗಮವೂ ಕೈಗೊಂಡಿರುವ ವ ಬ್ರ್ಯಾಂಡಿಂಗ್ ಹಾಗೂ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ “ಟಿವಿ-೯ ನೆಟ್ವರ್ಕ್ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ೨೦೨೪ರ ಪ್ರಶಸ್ತಿಯು ವರ್ಷದ ದೇಶದ ಅತ್ಯುತ್ತಮ ಸಂಸ್ಥೆ ವರ್ಗದಲ್ಲಿ ಲಭಿಸಿದೆ.
ಹೊಸದಿಲ್ಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ರಾಜ್ಯ ಸಚಿವರು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವ ಹರ್ಷ್ ಮಲೋತ್ರ ಅವರು ಕೆಎಸ್‌ಆರ್‌ಟಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಕೆಎಸ್‌ಆರ್‌ಟಿಸಿ ನಿಗಮದ ನಿರ್ದೇಶಕಿ ಡಾ. ನಂದಿನಿದೇವಿ ಕೆ. (ಸಿಬ್ಬಂದಿ ಮತ್ತು ಜಾಗೃತ)ಅವರು ಪ್ರಶಸ್ತಿ ಸ್ವೀಕರಿಸಿದರು.