ಮುಡಾ: ಸಿಎಂ ವಿರುದ್ಧ ಇಡಿಯಿಂದ ಇಸಿಐಆರ್ ದಾಖಲು
ನವದೆಹಲಿ, ಸೆ.30-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮುಖ್ಯಮಂತ್ರಿಗಳ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲಿಸಿದೆ.
ಲೋಕಾಯುಕ್ತದಲ್ಲಿ ಎಫ್ ಐಆರ್ ದಾಖಲಾದ ಬೆನ್ನಲ್ಲೇ, ಇಡಿ ಇಸಿಐಆರ್ ದಾಖಲು ಮಾಡಿದೆ.
ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇಡಿಇಸಿಐಆರ್ ದಾಖಲಿಸಿದೆ. ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳು ಉಲ್ಲೇಖವಾಗಿದೆ.
ಈ ನಾಲ್ವರನ್ನು ಆರೋಪಿಗಳನ್ನಾಗಿಸಿ ಇಡಿ ಇಸಿಐಆರ್ ದಾಖಲಿಸಿದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಿದೆ.
ಯಾವುದೇ ಸಂದರ್ಭದಲ್ಲಿ ಇಡಿಯಿಂದ ದಾಳಿಯಾಗುವ ಸಾಧ್ಯತೆ ಇದೆ. ದಾಖಲೆಗಳ ಪರಿಶೀಲನೆಗೆ ದಾಳಿ ಮಾಡಬಹುದು. ಪ್ರಕರಣದ ಪ್ರಮುಖ ಕೇಂದ್ರವಾಗಿರುವ ಮುಡಾ ಕಚೇರಿ ಹಾಗೂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಸಂಬಂಧಿಸಿದ ನಿವಾಸದ ಮೇಲೆ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.