ದೆಹಲಿ ಸಿಎಂ ಪ್ರಾಮಾಣಿಕ ಸಂಕೇತ
ನವದೆಹಲಿ,ಆ.೧೦:ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ೧೭ ತಿಂಗಳಿನಿಂದ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿರುವ ಮನೀಷ್ ಸಿಸೋಡಿಯಾ, ಅರವಿಂದ್ ಕೇಜ್ರಿವಾಲ್ ಪ್ರಾಮಾಣಿಕತೆಯ ಪ್ರತೀಕ ಎಂದು ಹೇಳಿದ್ದಾರೆ.
ನಿನ್ನೆ ಅವರು ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದರು. ಇಂದು ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ, ಕಾರ್ಯಕರ್ತರ ಕಣ್ಣೀರು ನನಗೆ ಶಕ್ತಿ ತುಂಬಿದೆ.
ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ ಸಿಸೋಡಿಯಾ, ಎಎಪಿ ನಾಯಕರನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಸುಳ್ಳು ಪ್ರಕರಣಗಳ ಮೇಲೆ ನಮ್ಮನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದರು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಹ ಶೀಘ್ರದಲ್ಲೇ ಜೈಲಿನಿಂದ ಹೊರಬರಲಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರನ್ನು ಮಣಿಸಲು ಸಿಬಿಐ ಮತ್ತು ಇಡಿಯಂತಹ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಬಳಸಿದೆ. ಆದರೆ, ದೆಹಲಿ ಸಿಎಂ ಪ್ರಾಮಾಣಿಕತೆಯ ಸಂಕೇತ ಎಂದರು.
೭ ರಿಂದ ೮ ತಿಂಗಳಲ್ಲಿ ನನಗೆ ನ್ಯಾಯ ದೊರಕುವ ನಿರೀಕ್ಷೆ ಇತ್ತು. ಆದರೆ, ೧೭ ತಿಂಗಳು ಜೈಲಿನಲ್ಲಿರಬೇಕಾಯಿತು. ಕೊನೆಗೆ ಪ್ರಾಮಾಣಿಕತೆಗೆ ಸತ್ಯಕ್ಕೆ ಜಯವಾಗಿದೆ. ಸುಪ್ರೀಂಕೋರ್ಟ್ ನೀಡಿರುವ ಆದೇಶ ಸರ್ವಾಧಿಕಾರಕ್ಕೆ ಕಡಿವಾಣ ಹಾಕಿದೆ.
ನಮ್ಮ ವಕೀಲ ಅಭಿಷೇಕ್ ಮನುಸಿಂಘ್ವಿ ಅವರು ದೇವರಿದ್ದಂತೆ ಎಂದಿದ್ದಾರೆ.