ಭೂಕುಸಿತ: ರೈಲು ಸಂಚಾರ ವ್ಯತ್ಯಯ
ಸಕಲೇಶಪುರ.ಆ.೧೦- ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು ರೈಲುಗಳು ಸಂಚಾರದಲ್ಲಿ ವ್ಯತ್ಯಯವಾಗಿದೆ.ಬೆಂಗಳೂರಿನಿಂದ ಮಂಗಳೂರು ಮತ್ತು ಮುರುಡೇಶ್ವರ ರೈಲು ಸಂಪರ್ಕ ಬಂದ್ ಆಗಿದೆ.
ಇತ್ತೀಚೆಗಷ್ಟೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್, ಎಡಕುಮೇರಿ ನಡುವೆ ಭೂಕುಸಿತ ಸಂಭವಿಸಿತ್ತು. ಇದಾದ ಬಳಿಕ ಈಗ ಮತ್ತೆ ಸಕಲೇಶಪುರ-ಬಾಳ್ಳುಪೇಟೆ ನಡುವೆ ಭೂಕುಸಿತ ಸಂಭವಿಸಿತ್ತು.
ಇದೀಗ ಹಾಸನ ಜಿಲ್ಲೆಯ ಸಕಲೇಶಪುರ-ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಗುಡ್ಡ ಕುಸಿದಿದೆ. ಈ ಹಿನ್ನೆಲೆಯಲ್ಲಿ ಮಧ್ಯರಾತ್ರಿಯಿಂದ ರೈಲುಗಳ ಸಂಚಾರ ಬಂದ್‌ಆಗಿದೆ. ರೈಲ್ವೆ ಇಲಾಖೆ ಕಾರ್ಮಿಕರು ಮಣ್ಣು ತೆರವು ಮಾಡುತ್ತಿದ್ದಾರೆ.
ಭಾರೀ ಮಳೆ ಸುರಿದ ಪರಿಣಾಮ ಎಡಕುಮೇರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ಮಧ್ಯೆ ಗುಡ್ಡ ಕುಸಿತ ಉಂಟಾಗಿರುವ ಕಾರಣ ರೈಲು ಸಂಚಾರ ಸ್ಥಗಿತವಾಗಿತ್ತು. ಗುರುವಾರ ಮತ್ತೆ ರೈಲು ಸಂಚಾರ ಆರಂಭವಾಗಿತ್ತು. ಈಗ ಮತ್ತೆ ಹಾಸನ ಭಾಗದಲ್ಲಿ ಹಳಿ ಮೇಲೆ ಗುಡ್ಡ ಕುಸಿದಿದೆ.
ಸಕಲೇಶಪುರ, ಯಡಕುಮಾರಿ, ಶಿರಿಬಾಗಿಲು, ಆಲೂರು ಸೇರಿ ಒಟ್ಟು ಆರು ಕಡೆ ರೈಲು ಸಂಚಾರ ನಿಂತಿದ. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರ ಪರದಾಡಿದರು. ಸಾವಿರಾರು ಪ್ರಯಾಣಿಕರು ಬೆಳಗಿನ ಜಾವದವರೆಗೆ ರೈಲಿನಲ್ಲೇ ಕಳೆದರು. ಬೆಳಗ್ಗೆ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ವಾಹನಗಳ ವ್ಯವಸ್ಥೆ ಮಾಡಿದೆ.ರೈಲುಗಳ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರು ರೈಲು ಬಿಟ್ಟು ಬಸ್?ಗಳತ್ತ ಮುಖ ಮಾಡಿದ್ದಾರೆ. ಬಸ್??ನಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.