ದೆಹಲಿಯಲ್ಲಿ ರಾಜ್ಯಪಾಲರಿಂದ ಕರ್ನಾಟಕ ಭವನದ ಕಟ್ಟಡ ನಿರ್ಮಾಣ ಕಾಮಗಾರಿ ಪರಿಶೀಲನೆ
ನವದೆಹಲಿ: ನವದೆಹಲಿಯಲ್ಲಿ ನಿರ್ಮಾಣ ಹಂತದಲ್ಲಿರುವ ಕರ್ನಾಟಕ ಭವನದ ನೂತನ ಕಟ್ಟಡಕ್ಕೆ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿ ಅಂತಿಮ ಕಾಮಗಾರಿ ಪರಿಶೀಲನೆ ನಡೆಸಿ, ನಿಗದಿತ ಸಮಯದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.