ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಮನು ಭಾಕರ್
ಪ್ಯಾರಿಸ್: ಮಹಿಳಾ ಶೂಟರ್ ಮನು ಭಾಕರ್ ಕಂಚಿನ ಪದಕ ಗೆಲ್ಲುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಇತಿಹಾಸ ನಿರ್ಮಸಿದ್ದಾರೆ. ಇದರೊಂದಿಗೆ ಭಾರತ ಒಲಿಂಪಿಕ್ಸ್ ನಲ್ಲಿ ಪದಕದ ಖಾತೆ ತೆರೆದಿದೆ. ಜತೆಗೆ ಒಲಿಂಪಿಕ್ಸ್ ನ ಶೂಟಿಂಗ್ ವಿಭಾಗದಲ್ಲಿ ಪದಕ ಗೆದ್ದ ಮೊದಲ ಮಹಿಳಾ ಶೂಟರ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
12 ವರ್ಷಗಳ ಬಳಿಕ ಭಾರತ ಒಲಿಂಪಿಕ್ಸ್ ನ ಶೂಟಿಂಗ್ ವಿಭಾಗದಲ್ಲಿ ಭಾರತ ಪದಕ ಗೆದ್ದುಕೊಂಡಿದೆ.
22 ವರ್ಷದ ಮನು ಭಾಕರ್ ಮಹಿಳೆಯರ 10 ಮೀ. ಏರ್ ಪಿಸ್ತೂಲ್ ಫೈನಲ್ ನಲ್ಲಿ ಮೂರನೆ ಸ್ಥಾನ ಪಡೆದರು. ಮೂರು ವರ್ಷಗಳ ಹಿಂದೆ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಸರಣಿ ಆಘಾತಗಳನ್ನು ಮನು ಭಾಕರ್ ಎದುರಿಸಿದ್ದರು. ಇದೀಗ ಈ ಪ್ರತಿಭಾನ್ವಿತಾ ಶೂಟರ್ ದೇಶಕ್ಕೆ ಕೀರ್ತಿ ತಂದಿದ್ದಾರೆ.
ಅಭಿನವ್ ಬಿಂದ್ರಾ, ರಾಜ್ಯವರ್ಧನ್ ಸಿಂಗ್ ರಾಥೋರ್, ವಿಜಯ್ ಕುಮಾರ್ ಮತ್ತು ಗಗನ್ ನರಾಂಗ್ ನಂತರ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ೈದನೆ ಶೂಟರ್ ಎಂಬ ಗೌರವಕ್ಕೆ ಮನು ಭಾಕರ್ ಪಾತ್ರರಾಗಿದ್ದಾರೆ.