ಬಸ್ ದರ ಏರಿ‌ಸಲು ಕೆ ಎಸ್ ಆರ್ ಟಿ ಸಿಯಿಂದ‌‌ ಪ್ರಸ್ತಾವನೆ ಸಲ್ಲಿಕೆ
ಬೆಂಗಳೂರು: ಸದ್ಯ ಪೆಟ್ರೋಲ್‌, ಡೀಸೆಲ್‌ ತೈಲ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳುತ್ತಿರುವ ಕರುನಾಡಿನ ಜನರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಬಸ್‌ ಪ್ರಯಾಣ ದರ ಹೆಚ್ಚಿಸಲು ಕೆಎಸ್‌ಆರ್‌ಟಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಬಸ್‌ ಪ್ರಯಾಣ ದರ 15% ರಿಂದ 20% ವರೆಗೆ ಹೆಚ್ಚಿಸಲು ಜುಲೈ 14ರಂದೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಂದು ಪ್ರತಿಕ್ರಿಯಿಸಿದ್ದು, ಪ್ರಸ್ತಾವನೆ ಬಂದಿದೆ. ನಾನಿನ್ನೂ ಅದನ್ನ ನೋಡಿಲ್ಲ, ದರ ಏರಿಕೆ ಮಾಡುವ ಬಗ್ಗೆ ಸದ್ಯಕ್ಕೆ ಯಾವುದೇ ನಿರ್ಧಾರ ಆಗಿಲ್ಲವೆಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಪ್ರತಿಭಟನೆಯಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಬಿಜೆಪಿ ಪಕ್ಷದಿಂದ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ರಾಜ್ಯಕ್ಕೆ ಕಾಯಂ ಆಗಿ ಚೊಂಬು ಸಿಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್‌ ಆಯ್ಕೆ ಆಗಿದ್ದರೂ ಕೃತಜ್ಞತೆ ಇಲ್ಲ. ನರೇಂದ್ರ ಮೋದಿ ಏನೂ ಮಾಡಿಲ್ಲ . ಆದರೂ19 ಜನರನ್ನು ಜನ ಸಂಸದರನ್ನ ಆಯ್ಕೆ ಮಾಡಿ ಕಳಿಸಿದ್ದಾರೆ ಇದು ದುರದೃಷ್ಟಕರ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.