ಶ್ರೀರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ಹರಿದು ಬಂದ ಕಾಣಿಕೆ..!
ಬೆಳಗಾವಿ, ಜು.26- ರಾಜ್ಯ ಮಾತ್ರವಲ್ಲದೆ ನೆರೆಯ ಭಾಗದಲ್ಲೂ ಅಪಾರ ಭಕ್ತರನ್ನು ಹೊಂದಿರುವ ಸವದತ್ತಿ ಶ್ರೀರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ಕಾಣಿಕೆ ಹರಿದು ಬಂದಿದ್ದು, ಕೇವಲ 50 ದಿನದಲ್ಲಿ ಬರೋಬರಿ 1.96ಕೋಟಿ ಭಕ್ತರ ಕಾಣಿಕೆ ಸಂಗ್ರಹವಾಗಿದೆ‌.
ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮನ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಏಪ್ರಿಲ್‌ 1ರಿಂದ ಮೇ 20ರ ಅವಧಿಯಲ್ಲಿ ಭಕ್ತರು ಹಾಕಿದ್ದ ಭಕ್ತರ ಕಾಣಿಕೆ ಎಣಿಕೆ ಬುಧುವಾರ ರಾತ್ರಿ ಮುಕ್ತಾಯವಾಗಿದೆ‌‌. 50ದಿನಗಳಲ್ಲಿ ಒಟ್ಟು 1.96 ಕೋಟಿ ರೂ. ಕಾಣಿಕೆ‌ ಸಂಗ್ರಹವಾಗಿದೆ.
ಅದರಲ್ಲಿ 1.71 ಕೋಟಿ ನಗದು, 20.44 ಲಕ್ಷ ಮೌಲ್ಯದ ಚಿನ್ನಾಭರಣ, 4.44 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ.
ಶಕ್ತಿಯೋಜನೆಯಿಂದ ಯಲ್ಲಮ್ಮನ ಗುಡ್ಡಕ್ಕೆ ಅಪಾರ ಸಂಖ್ಯೆಯಲ್ಲಿ ಮಹಿಳಾ ಭಕ್ತರ ಹೆಚ್ಚಳವಾಗಿದೆ. ಹಾಗಾಗಿ ದಾಖಲೆ ಪ್ರಮಾಣದಲ್ಲಿ ದೇಣಿಗೆ ಸಂಗ್ರಹವಾಗಿದೆ
ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಪಿಬಿ ಮಹೇಶ ಮಾಹಿತಿ ನೀಡಿದ್ದಾರೆ.