ಮಹಾರಾಷ್ಟ್ರದಲ್ಲಿ ಭಾರೀ ಮಳೆ ರೆಡ್ ಅಲರ್ಟ್ ಘೋಷಣೆ
ಮುಂಬೈ,ಜು,೨೬- ಮಹಾರಾಷ್ಟ್ರದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪೊವೈ ಸರೋವರ ಉಕ್ಕಿ ಹರಿಯುತ್ತಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.
ಭಾರಿ ಮಳೆ ಮತ್ತು ಪ್ರವಾಹದಿಂದ ಜನರು ಸಮಸ್ಯೆಗೆ ಸಿಲುಕಿದ್ದು ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡುವ ಕೆಲಸ ನಡೆಯುತ್ತಿದೆ. ಸ್ಥಳೀಯ ಅಧಿಕಾರಿಗಳು ನೀಡುವ ಯಾವುದೇ ಸಲಹೆಗಳು ಅಥವಾ ಸೂಚನೆಗಳನ್ನು ಅನುಸರಿಸಲು ಸೂಚಿಸಲಾಗಿದೆ.
ಮಹಾರಾಷ್ಟ್ರದ ಹಲವಾರು ಪ್ರದೇಶಗಳು ಪ್ರಸ್ತುತ ನಿರಂತರ ಭಾರೀ ಮಳೆ ಸುರಿಯುತ್ತಿದ್ದು ಮುಂಬೈ ಸೇರಿದಂತೆ ಹಲವು ನಗರಗಳಲ್ಲಿ ತೀವ್ರ ಜಲಾವೃತ ಮತ್ತು ವ್ಯಾಪಕ ಸಂಚಾರ ದಟ್ಟಣೆ ಎದುರಾಗಿದ್ದು ಜನರು ಪರದಾಡುವಂತಾಗಿದೆ
ಮಧ್ಯ ಮಹಾರಾಷ್ಟ್ರದ ಕೆಲವು ಭಾಗಗಳಿಗೆ ರೆಡ್ ಅಲರ್ಟ್ ನೀಡಿದೆ, ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಜನರು ಅನಗತ್ಯವಾಗಿ ಮನೆಯಿಂದ ಹೊರ ಬರುವ ಕೆಲಸ ಮಾಡಬೇಡಿ ಎಂದು ಹವಾಮಾನ ಇಲಾಖೆ ಮನವಿ ಮಾಡಿದೆ
ಅನಿವಾರ್ಯವಲ್ಲದ ಪ್ರಯಾಣ ತಪ್ಪಿಸಲು ಮತ್ತು ಸಾಧ್ಯವಾದಷ್ಟು ಮನೆಯೊಳಗೆ ಇರಲು ಸಲಹೆ ನೀಡಿದೆ. ಪ್ರತಿಕೂಲ ಹವಾಮಾನದಿಂದ ಉಂಟಾದ ಯಾವುದೇ ಘಟನೆಗಳಿಗೆ ಪ್ರತಿಕ್ರಿಯಿಸಲು ತುರ್ತು ಸೇವೆಗಳು ಹೆಚ್ಚಿನ ಎಚ್ಚರಿಕೆ ನೀಡಿದೆಈ ನಡುವೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ಕೂಡ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ
ಬೃಹನ್‌ಮುಂಬೈ ಮುನ್ಸಿಪಲ್ ಕಾಪೆರ್ರೇಷನ್‌ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಎಲ್ಲಾ ಶಿಕ್ಷಕರಿಗೆ ಸಂಬಂಧಪಟ್ಟ ಪೊ?ಷಕರಿಗೆ ತಿಳಿಸಲು ಮತ್ತು ಶಾಲಾ ಮಟ್ಟದಲ್ಲಿ ಸರಿಯಾದ ಸಮನ್ವಯದೊಂದಿಗೆ ಶಾಲೆಯನ್ನು ತೊರೆಯುವಾಗ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಸೂಚಿಸಿದೆ.