ಬೆಳಗಾವಿಯಲ್ಲಿ ಭಾರೀ ಮಳೆ
ಬೆಳಗಾವಿ ,ಜು.೨೪- ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ಬೆಳಗಾವಿ ತಾಲೂಕು, ಖಾನಾಪುರ, ಕಿತ್ತೂರು ಹಾಗೂ ಬೈಲಹೊಂಗಲ ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ, ಖಾನಾಪುರ, ಬೈಲಹೊಂಗಲ ಹಾಗೂ ಕಿತ್ತೂರು ತಾಲೂಕಿನ ಅಂಗನವಾಡಿಗಳಲ್ಲಿರುವ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ಬುಧವಾರ (ಜೂ.೨೪) ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಅದೇ ರೀತಿ ಬೆಳಗಾವಿ ಮತ್ತು ಖಾನಾಪುರ ತಾಲೂಕಿನಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.