ಲಾಲೂಗೆ ಅನಾರೋಗ್ಯ ಆಸ್ಪತ್ರೆಗೆ ದಾಖಲು
ನವದೆಹಲಿ,ಜು.೨೪:ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂಪ್ರಸಾದ್ ಯಾಧವ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಲಾಲೂ ಅವರ ಮೇಲೆ ವೈದ್ಯರು ನಿಗಾವಹಿಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಲಾಲೂಪ್ರಸಾದ್ ಅನಾರೋಗ್ಯ ಕುರಿತಂತೆ ಪ್ರಿನ್ಸ್‌ಯಾಧವ್ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿದೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಬಿಹಾರದ ಜನತೆಯ ಪರವಾಗಿ ದೇವರಲ್ಲಿ ಪ್ರಾರ್ಥಿಸುವುದಾಗಿ ಬರೆದುಕೊಂಡಿದ್ದಾರೆ. ಲಾಲೂಪ್ರಸಾದ್ ಆಸ್ಪತ್ರೆಯ ಬೆಡ್ ಮೇಲಿನ ಫೋಟೊಗಳನ್ನೂ ಕೂಡ ಅವರು ಹಂಚಿಕೊಂಡಿದ್ದಾರೆ.