ಬಿಟ್ ಕಾಯಿನ್ ಆರೋಪಿಗಳಿಗೆ ಜಾಮೀನು
ಬೆಂಗಳೂರು,ಜು.೨೪-ಬಹುಕೋಟಿ ಬಿಟ್ ಕಾಯಿನ್ ಕಳ್ಳತನ ಪ್ರಕರಣದಲ್ಲಿ ಆರೋಪಿಗಳಾಗಿ ನ್ಯಾಯಾಂಗ ಬಂಧನದಲ್ಲಿರುವ ಶ್ರೀಕಿ , ರಮೇಶ್ ಮತ್ತು ರಾಬಿನ್ ಖಂಡೇಲ್ ವಾಲಾ ಅವರಿಗೆ ತುಮಕೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಈ ಮೂವರು ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ೧ನೇ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಧೀಶ ಎನ್.ಸುಬ್ರಹ್ಮಣ್ಯ ಅವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದಾರೆ. ೫೦,೦೦೦ ಬಾಂಡ್ ಮತ್ತು ಒಂದು ಶ್ಯೂರಿಟಿಯನ್ನು ಶ್ರೀಕಿಯಿಂದ ಪಡೆಯಲಾಗಿದೆ. ೨೫,೦೦೦ ಮೌಲ್ಯದ ಬಾಂಡ್ ಮತ್ತು ಒಬ್ಬ ವ್ಯಕ್ತಿಯ ಶ್ಯೂರಿಟಿಯನ್ನು ರಬಿನ್ ಖಂಡೇಲ್ ವಾಲಾ ಅವರಿಂದ ಪಡೆಯಲಾಗಿದೆ.
ತನಿಖೆಯ ೬೦ ದಿನಗಳಲ್ಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಚಾರ್ಜ್ ಶೀಟ್ ಸಲ್ಲಿಕೆ ವಿಳಂಬವಾದ ಕಾರಣ ಸುಪ್ರೀಂ ಕೋರ್ಟ್ ಆದೇಶದಂತೆ ಜಾಮೀನು ನೀಡಲಾಗಿದೆ. ಆನ್‌ಲೈನ್ ವಂಚನೆಯಿಂದಾಗಿ ತುಮಕೂರಿನ ಉದ್ಯಮಿಯೊಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.