ಅಮೆರಿಕ ಅಧ್ಯಕ್ಷೀಯ ಚುನಾವಣೆ ಟ್ರಂಪ್-ಕಮಲಾ ನಡುವೆ ಪೈಪೋಟಿ
ವಾಷಿಂಗ್ಟನ್,ಜು.೨೩- ಅಮೆರಿಕಾ ಅಧ್ಯಕ್ಷೀಯ ಚುನಾವಣೆಯ ಕಣದಿಂದ ಹಾಲಿ ಅಧ್ಯಕ್ಷ ಜೋ ಬೈಡೆನ್ ಹಿಂದೆ ಸರಿದ ಕಾರಣ ಡೆಮಾಕ್ರಟಿಕ್ ಪಕ್ಷದಿಂದ ಕಮಲಾ ಹ್ಯಾರೀಸ್ ಅಧ್ಯಕ್ಷೀಯ ಚುನಾವಣೆಯ ಅಧಿಕೃತ ನಾಮನಿರ್ದೇಶನ ಅಭ್ಯರ್ಥಿಯಾಗಿದ್ದು ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ.
ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಹಾಗೂ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರನ್ನು ಕಣದಲ್ಲಿದ್ದು ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಮತ್ತು ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ನಡುವೆ ಅಧ್ಯಕ್ಷೀಯ ಚುನಾವಣೆಗೆ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ.
ನವಂಬರ್ ೫ ರಂದು ಅಮೆರಿಕಾ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು ಹಾಲಿ ಅಧ್ಯಕ್ಷ ಜೋ ಬೈಡನ್ ತನ್ನ ಮರು-ಚುನಾವಣೆಯ ಪ್ರಯತ್ನದಿಂದ ಹಿಂದೆ ಸರಿದ ಬಳಿಕ ಡೆಮಾಕ್ರಟಿಕ್ ಅಧ್ಯಕ್ಷೀಯ ನಾಮನಿರ್ದೇಶೀತರಾಗಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ಗೆಅಧ್ಯಕ್ಷೀಯ ಮಾರ್ಗ ಸುಲಭವಾಗಿದೆ
ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರನ್ನು ಸೋಲಿಸುವುದು ನಮ್ಮ ಮುಂದಿರುವ ಪ್ರಮುಖ ಗುರಿ ಎಂದು ಕಮಲಾ ಹ್ಯಾರೀಸ್ ಹೇಳಿದ್ದಾರೆ.
ಇತ್ತೀಚಿನ ಸಮೀಕ್ಷೆಗಳ ಪ್ರಕಾರ, ಕಮಲಾ ಹ್ಯಾರಿಸ್ ಅವರು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹಿಂದಿಕ್ಕಿದ್ದು ಚುನಾವಣೆಯಲ್ಲಿ ಗೆಲುವು ಸಾಧಿಸುವ ವಿಶ್ವಾಸದಲ್ಲಿದ್ದಾರೆ.
ಅಧ್ಯಕ್ಷೀಯ ಚಉನಾವಣೆಗೆ ಇನ್ನು ಮೂರುವರೆ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಡೆಮಾಕ್ರಟಿಕ್ ಮತ್ತು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಗಳಿಂದ ಮತದಾರರ ಮನ ಗೆಲ್ಲುವು ನಾನಾ ಕಸರತ್ತು ಮಾಡಿದ್ದಾರೆ