ಮುಂಗಡ ಪತ್ರಕ್ಕೆ ಕೇಂದ್ರ ಸಂಪುಟ ಒಪ್ಪಿಗೆ
ನವದೆಹಲಿ, ಜು. ೨೩- ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಿತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸಲಿರುವ ೨೦೨೪-೨೫ನೇ ಸಾಲಿನ ಮುಂಗಡ ಪತ್ರಕ್ಕೆ ಅನುಮೋದನೆ ನೀಡಲಾಯಿತು.
ಸಂಸತ್ ಪ್ರವೇಶಿಸುವ ಮುನ್ನ ಸಚಿವೆ ನಿರ್ಮಲಾ ಅವರು ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ ಅವರೊಂದಿಗೆ ಬಜೆಟ್ ಪ್ರತಿಯಿರುವ ಟ್ಯಾಬ್‌ಅನ್ನು ಪ್ರದರ್ಶಿಸಿದರು.
ಇದಕ್ಕೂ ಮುನ್ನ ರಾಷ್ಟ್ರಪತಿ ಭವನದಲ್ಲಿ ಕೇಂದ್ರ ಹಣಕಾಸು ಸಚಿವರು ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಭೇಟಿ ಮಾಡಿದರು. ರಾಷ್ಟ್ರಪತಿ ಅವರು ನಿರ್ಮಲಾ ಅವರಿಗೆ ಸಿಹಿ ತಿನ್ನಿಸಿ ಶುಭ ಕೋರಿದರು.
ನಿರ್ಮಲಾ ಅವರು ಸತತ ೭ನೇ ಬಾರಿಗೆ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.