ಶನಿವಾರ 12ಗಂಟೆಯೊಳಗೆ ಪಿಜಿ-ನೀಟ್ ಫಲಿತಾಂಶ ಪ್ರಕಟಕ್ಕೆ ಸುಪ್ರೀಂ ಸೂಚನೆ
ನವದೆಹಲಿ:ನೀಟ್-ಯುಜಿ ಪರೀಕ್ಷೆಯ 2024 ರ ಪೂರ್ಣ ಫಲಿತಾಂಶಗಳನ್ನು ನಾಳೆ ಬೆಳಿಗ್ಗೆ (ಜುಲೈ 20) 12 ಗಂಟೆಯೊಳಗೆ ತನ್ನ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ)ಗೆ ಸುಪ್ರೀಂಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.
ಅಭ್ಯರ್ಥಿಗಳ ಗುರುತನ್ನು ಬಹಿರಂಪಡಿಸಬಾರದು. ನಗರ ಮತ್ತು ಕೇಂದ್ರವಾರು ಫಲಿತಾಂಶಗಳನ್ನು ಪ್ರಕಟಿಸುವಂತೆ ಸೂಚಿಸಿದೆ.
ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ 40 ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ‌ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಮುಂದೆ ನಡೆಯಿತು.
ಅರ್ಜಿದಾರರ ಪರ ಹಿರಿಯ ವಕೀಲ ನರೇಂದ್ರ ಹೂಡಾ ವಾದ ಮಂಡಿಸಿ, ಎಲ್ಲ ವಿದ್ಯಾರ್ಥಿಗಳ ಫಲಿತಾಂಶ ಘೋಷಿಸಿ ಪಾರದರ್ಶಕತೆ ಕಾಯ್ದುಕೊಳ್ಳಬೇಕೆಂದು ತಿಳಿಸಿದರು.
ಸಾಲಿಸಿಟರ್ ಜನರಲ್ ವಾದ ಮಂಡಿಸಿ ವಿದ್ಯಾರ್ಥಿಗಳ ವೈಯಕ್ತಿಕ ಆಸ್ತಿಯಾಗಿರುವ
ನೀಟ್-ಯುಜಿಯ ಪೂರ್ಣ ಫಲಿತಾಂಶ ಪ್ರಕಟಿಸಿಲ್ಲ ಎಂಬ ವಿಷಯವನ್ನು ನ್ಯಾಯಪೀಠದ ಗಮನಕ್ಕೆ ತಂದರು.
ಈ ವೇಳೆ ಮಧ್ಯ ಪ್ರವೇಶಿಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್, ಎಲ್ಲ ಕೇಂದ್ರಗಳ ಮಾಹಿತಿ ಪ್ರಕಾರ ಡಮ್ಮಿ ನೋಂದಣಿ ಸಂಖ್ಯೆ ಏಕೆ ಹೊಂದಿಲ್ಲ ಎಂದು ಪ್ರಶ್ನಿಸಿದರು.
ಎರಡೂ ಕಡೆ ವಾದ-ಪ್ರತಿವಾದ ಆಲಿಸಿದ ತ್ರಿಸದಸ್ಯ ಪೀಠ ‌ನೀಟ್-ಯುಜಿ 2024ರ ಪರೀಕ್ಷಾ ಫಲಿತಾಂಶ ಪ್ರಕಟಿಸಿ ವಿದ್ಯಾರ್ಥಿಗಳು ಪಡೆದಿರುವ ಅಂಕಗಳ ವಿವರ ನೀಡಬೇಕು. ಆದರೆ ವಿದ್ಯಾರ್ಥಿಗಳ ಗುರುತನ್ನು ಬಹಿರಂಗಪಡಿಸಬಾರದು ಎಂದು ಹೇಳಿತು.
ಪಾಟ್ನಾ ಮತ್ತು ಹಜಾರಿಬಾಗ್ ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಅಂಶವನ್ನು ಒಪ್ಪಿಕೊಳ್ಳಲಾಗಿದೆ.ಪ್ರಶ್ನೆ ಪತ್ರಿಕೆಗಳನ್ನು ಪ್ರಸಾರ ಮಾಡಲಾಗಿತ್ತು. ಇದು‌ ಆಯಾ ಕೇಂದ್ರಗಳಿಗೆ ಮಾತ್ರ ಸೀಮಿತವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಬಯಸುತ್ತೇವೆ. ಫಲಿತಾಂಶ ಪ್ರಕಟವಾಗದೆ ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ವಿದ್ಯಾರ್ಥಿಗಳ ಗುರುತನ್ನು ಮರೆ ಮಾಚಬೇಕೆಂದು ಬಯಸುತ್ತೇವೆ. ಆದರೆ ಕೇಂದ್ರವಾರು ಅಂಕ ಮಾದರಿಯನ್ನು ಏನೆಂದು ನೋಡೊಣ ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.
ಈ ಆದೇಶ ಪ್ರಕಟಿಸಿದ ಬಳಿಕ ನ್ಯಾಯಪೀಠ ವಿಚಾರಣೆಯನ್ನು ಜು 22ಕ್ಕೆ ಮುಂದೂಡಿತು.