ನೂತನ ನ್ಯಾಯಾಧೀಶರ ಪ್ರಮಾಣ ವಚನ
ನವದೆಹಲಿ ಜು.೧೮- ನ್ಯಾಯಮೂರ್ತಿಗಳಾದ ಎನ್ ಕೋಟಿಶ್ವರ್ ಸಿಂಗ್ ಮತ್ತು ಆರ್ ಮಹಾದೇವನ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಇದರೊಂದಿಗೆ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಧೀಶರ ಸಂಖ್ಯೆ ೩೪ ಕ್ಕೆ ಏರಿಕೆಯಾಗಿದೆ.
ನ್ಯಾಯಮೂರ್ತಿ ಕೊಟೇಶ್ವರ್ ಸಿಂಗ್ ಈಗ ಮಣಿಪುರದ ಮೊದಲ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಮಹದೇವನ್ ಮತ್ತು ಅವರಿಗೆ ಪ್ರಮಾಣ ವಚನ ಬೋಧಿಸಿದರು.
ನ್ಯಾಯಮೂರ್ತಿ ಕೋಟೇಶ್ವರ್ ಸಿಂಗ್ ಅವರು ಸುಪ್ರೀಂ ಕೋರ್ಟೆ? ಗೆ ಬಡ್ತಿ ಪಡೆಯುವ ಮೊದಲು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದರೆ, ನ್ಯಾಯಮೂರ್ತಿ ಮಹಾದೇವನ್ ಮದ್ರಾಸ್ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದರು.
ಇದೇ ವರ್ಷದ ಸೆಪ್ಟೆಂಬರ್ ೧ರಂದು ನ್ಯಾಯಮೂರ್ತಿ ಹಿಮಾ ಕೊಹ್ಲಿ ನಿವೃತ್ತರಾಗುವವರೆಗೆ ಸುಪ್ರೀಂ ಕೋರ್ಟ್ ೩೪ ನ್ಯಾಯಾಧೀಶರೊಂದಿಗೆ ಕಾರ್ಯನಿರ್ವಹಿಸುತ್ತದೆ, ನಂತರ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನವೆಂಬರ್ ೧೦ ರಂದು ನಿವೃತ್ತರಾಗಲಿದ್ದಾರೆ.
ಇತ್ತೀಚಿನ ಸುಪ್ರೀಂ ಕೋರ್ಟ್ ನೇಮಕಾತಿಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿತ್ತು . ಮುಖ್ಯನ್ಯಾಯಮೂರ್ತಿ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಜುಲೈ ೧೧ ರಂದು ನ್ಯಾಯಮೂರ್ತಿಗಳಾದ ಮಹಾದೇವನ್ ಮತ್ತು ಸಿಂಗ್ ಅವರ ಹೆಸರನ್ನು ಸುಪ್ರೀಂ ಕೋರ್ಟ್ಗೆ ಬಡ್ತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಿತ್ತು.
ನ್ಯಾಯಮೂರ್ತಿ ಮಹಾದೇವನ್ ಅವರ ಪದೋನ್ನತಿಗೆ ಶಿಫಾರಸು ಮಾಡಿದ ಕೊಲಿಜಿಯಂನ ನಿರ್ಣಯದಿಂದ ಹಿಂದುಳಿದ ಸಮುದಾಯಕ್ಕೆ ಸೇರಿದವರಿಗೆ ನ್ಯಾಯಾಧೀಶರಾಗುವ ಅವಕಾಶ ಸಿಕ್ಕಿದೆ.