ಅಮೆರಿಕ ಅಧ್ಯಕ್ಷ ಬೈಡನ್‌ಗೆ ಕೋವಿಡ್
ವಾಷಿಂಗ್ಟನ್, ಜು,೧೮- ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರಿಗೆ ಕೋವಿಡ್-೧೯ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಕಳೆದ ಹಲವು ವರ್ಷಗಳ ನಂತರ ಸೋಂಕು ಅಮೆರಿಕಾದಲ್ಲಿ ಕಾಣಿಸಿಕೊಂಡಿರುವುದು ಆತಂಕ ಮೂಡಿಸಿದೆ.
ಕೋವಿಡ್ ಸೋಂಕಿನ ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಸ್ವಯಂ ಗೃಹಬಂಧನದಲ್ಲಿರುವುದಾಗಿ ಜೋ ಬೈಡನ್ ತಿಳಿಸಿದ್ದಾರೆ.
ಈ ವರ್ಷದ ನವಂಬರ್ ೫ ರಂದು ಅಮೆರಿಕಾ ಅಧ್ಯಕ್ಷರ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದ ಜೋಬೈಡನ್ ಅವರಿಗೆ ರೋಗ ಲಕ್ಷಣ ಕಾಣಿಸಿಕೊಂಡಿದೆ.. ಈ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಶ್ವೇತಭವನದ ಮೂಲಗಳು ತಿಳಿಸಿವೆ.
ಅಮೆರಿಕಾಕ್ಕೆ ಮತ್ತೊಮ್ಮೆ ಅಧ್ಯಕ್ಷರಾಗಬೇಕು ಎನ್ನುವ ಉಮೇದಿನಲ್ಲಿ ಸ್ಪರ್ಧೆ ಮಾಡಿರುವ ಜೋ ಬೈಡನ್ ಅವರು ಲಾಸ್ ವೇಗಾಸ್ ನಲ್ಲಿ ಪ್ರಚಾರ ಮಾಡುವ ಸಮಯದಲ್ಲಿ ರೋಗ ಲಕ್ಷಣ ಕಾಣಿಸಿಕೊಂಡು ಕೋವಿಡ್ ದೃಢಪಟ್ಟಿದೆ. ತಕ್ಷಣ ಅವರು ಶ್ವೇತ ಭವನಕ್ಕೆ ಮರಳಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ಹೇಳಿದ್ದಾರೆ.
೮೧ ವರ್ಷದ ಅಧ್ಯಕ್ಷ ಜೋ ಬೈಡನ್ ಅವರಿಗೆ ಸ್ವಯಂ ಪ್ರೇರಿತವಾಗಿ ಕ್ವಾರಂಟೈನ್‌ನಲ್ಲಿದ್ದು ಅಮೆರಿಕಾ ಅಧ್ಯಕ್ಷರ ಕರ್ತವ್ಯಗಳನ್ನು ಮುಂದುವರಿಸುತ್ತಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕೋವಿಡ್ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ಸೌಮ್ಯ ರೋಗಲಕ್ಷಣಗಳು ಆಗಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸ್ವಯಂ ಪ್ರತ್ಯೇಕವಾಗುತ್ತಾರೆ ಇದನ್ನು ಸಮಯದಲ್ಲಿ ಅವರ ಎಲ್ಲಾ ಕರ್ತವ್ಯಗಳು ಸಂಪೂರ್ಣ ನಿಭಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅಮೆರಿಕಾ ಅಧ್ಯಕ್ಷ ಜೋ ಬೈಡನ್, ಕೋವಿಡ್-೧೯ ಧನಾತ್ಮಕ ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ಪರೀಕ್ಷೆಗೆ ಒಳಗಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದೇನೆ. ಶೀಘ್ರ ಚೇತರಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ
ಶ್ವೇತಭವನದ ಹೇಳಿಕೆಯ ಪ್ರಕಾರ, ಅಧ್ಯಕ್ಷ ಜೋ ಬೈಡನ್ ಅವರು ಸಾಮಾನ್ಯ ಅಸ್ವಸ್ಥತೆಯೊಂದಿಗೆ ಸ್ರವಿಸುವ ಮೂಗು ಮತ್ತು ಉತ್ಪಾದಕವಲ್ಲದ ಕೆಮ್ಮು ಸೇರಿದಂತೆ ಮೇಲ್ಭಾಗದ ಉಸಿರಾಟದ ರೋಗಲಕ್ಷಣ ಅನುಭವಿಸುತ್ತಿದ್ದರು ಎಂದು ತಿಳಿಸಿದ್ದಾರೆ.