ದೇಶದ ಹಲವೆಡೆ ಗುಡುಗು ಸಹಿತ ಮಳೆ: ರೆಡ್ ಅಲರ್ಟ್ ಘೋಷಣೆ
ನವದೆಹಲಿ,ಜು.೧೬- ದೇಶದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಆಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಮುಂಗಾರು ಈಗ ಕೆಳಮುಖವಾಗಿ ಚಲಿಸಲು ಪ್ರಾರಂಭಿಸಿದೆ. ಇದರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಹಲವು ದಿನಗಳಲ್ಲಿ ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ಕೊಂಕಣ ಗೋವಾದ ಕರಾವಳಿ ಪ್ರದೇಶಗಳಲ್ಲಿ ೨೦ ಸೆಂ.ಮೀ ಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ಎಂದು ಮುನ್ಸೂಚನೆ ನೀಡಿದೆ
ಮಹಾರಾಷ್ಟ್ರ, ಗೋವಾ ಮತ್ತು ಕೇರಳದ ಕೆಲವು ಭಾಗಗಳಲ್ಲಿ ರೆಡ್ ಅಲರ್ಟ್ ನೀಡಿದ್ದು, ದಿನವಿಡೀ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದ್ದು ಜನರು ಎಚ್ಚರಿಕೆ ಇರುವಂತೆ ಸೂಚಿಸಿದೆ.
ಮಹಾರಾಷ್ಟ್ರ, ಕೇರಳ ಮತ್ತು ಕೊಂಕಣ ಗೋವಾದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ದೇಶದ ಹಲವು ರಾಜ್ಯಗಳ ಕೆಲವು ಭಾಗಗಳಲ್ಲಿ ರೆಡ್ ಅಲರ್ಟ್ ನೀಡಿದೆ. ಭಾರೀ ಮಳೆ. ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ವಾರದ ಉಳಿದ ಭಾಗಗಳಲ್ಲಿ ಲಘು ಮಳೆ ಮುಂದುವರಿಯುತ್ತದೆ ಎಂದು ಭವಿಷ್ಯ ನುಡಿದಿದೆ.
ಮುಂಬೈ, ಥಾಣೆ, ಪಾಲ್ಘರ್, ರತ್ನಗಿರಿ, ಸಿಂಧುದುರ್ಗ, ಪುಣೆ, ಸತಾರ್ ನಲ್ಲಿ ರೆಡ್ ಅಲರ್ಟ್ ಮತ್ತು ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ. ಕೇರಳದಲ್ಲಿ, ಕೇರಳದ ಮಲಪ್ಪುರಂ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಹವಾಮಾನ ಸಂಸ್ಥೆ ರೆಡ್ ಅಲರ್ಟ್ ಮತ್ತು ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮಹಾರಾಷ್ಟ್ರದಲ್ಲಿ, ಥಾಣೆಯ ಭಿವಂಡಿ ಪ್ರದೇಶದಲ್ಲಿ ಕಾಮ್ವಾರಿ ನದಿ ನೀರಿನ ಮಟ್ಟ ಹೆಚ್ಚಿದ ಕಾರಣ ಉಕ್ಕಿ ಹರಿಯುತ್ತಿದ್ದು, ಕರಾವಳಿ ಪ್ರದೇಶಗಳಲ್ಲಿ ವಾಸಿಸುವವರ ಮನೆಗಳಿಗೆ ನೀರು ನುಗ್ಗಿದೆ. ಸುಲ್ತಾನಿಯಾ ಗಲಿ ಪ್ರದೇಶದಲ್ಲಿ ಮೊಣಕಾಲು ಆಳದ ನೀರು ತುಂಬಿದ ನಂತರ ಡಜನ್‌ಗಳು ತಮ್ಮ ಮನೆಗಳಿಂದ ಸ್ಥಳಾಂತರಗೊಂಡಿದ್ದು ಸುರಕ್ಷಿತ ಸ್ಥಳಕ್ಕೆ ತೆರಳಲು ಪರದಾಡಿದ್ದಾರೆ
ಕರ್ನಾಟಕದ ದಕ್ಷಿಣ ಒಳನಾಡಿನ ಮತ್ತು ಕರಾವಳಿ ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಭಾರೀ ಮಳೆಯ ನಡುವೆ ಆರಗ, ಚೆಂಡಿಯಾ, ಇಡೂರು ಮತ್ತು ತೋಡೂರು ಗ್ರಾಮಗಳ ಅನೇಕ ಪ್ರದೇಶಗಳು ಸಂಪೂರ್ಣವಾಗಿ ಮುಳುಗಿವೆ. ಗುಡುಗು ಸಹಿತ ಮಳೆಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.
ಕರಾವಳಿ ಕರ್ನಾಟಕ, ಕೇರಳ ಮತ್ತು ಕೊಂಕಣ ಗೋವಾಗಳಿಗೆ ರೆಡ್ ಅಲರ್ಟ್ ನೀಡುತ್ತಿದ್ದೇವೆ. ಅಲ್ಲಿ ೨೦ ಸೆಂ.ಮೀಗಿಂತ ಹೆಚ್ಚು ಮಳೆಯಾಗಬಹುದು. ದೆಹಲಿ ರಾಷ್ಟ್ರ ರಾಜಧಾನಿ ವಲಯದಲ್ಲಿ ಮುಂಬರುವ ದಿನಗಳಲ್ಲಿ ಲಘು ಮಳೆಯಾಗಲಿದೆ. ದೆಹಲಿಗೆ ಯಾವುದೇ ಎಚ್ಚರಿಕೆ ಇಲ್ಲ” ಎಂದು ಹವಾಮಾನ ಇಲಾಖೆ ವಿಜ್ಞಾನಿ ಡಾ. ನರೇಶ್ ಕುಮಾರ್ ತಿಳಿಸಿದ್ದಾರೆ.
ಮುಂದಿನ ಆರು ದಿನಗಳ ಕಾಲ ದೆಹಲಿ ಎನ್‌ಸಿಆರ್‍ನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರಿಯುತ್ತದೆ ಎಂದು ಹೇಳಿದೆ