ಲೋಕಸಭಾ ಚುನಾವಣೆ: ಹೆಚ್ಚಿನ ಸ್ಥಾನ ಗಳಿಕೆಗೆ ಕಾರ್‍ಯಕರ್ತರ ಶ್ರಮ ಕಾರಣ
ಬೆಂಗಳೂರು, ಜು.೧೬- ರಾಜ್ಯದಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರ ಸಂಘಟಿತ ಪ್ರಯತ್ನದಿಂದ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸಲು ಸಹಕಾರಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ರಾಜ್ಯದಲ್ಲಿ ಉತ್ತಮ ಸಂಘಟನೆ ಮಾಡಿದ್ದಾರೆ ಇದರ ಪ್ರತಿಫಲ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿಕ್ಕೆ ಬಂತು ಮತ್ತು ಲೋಕಸಭಾ ಚುನಾವಣೆಯಲ್ಲಿ ಅತಿಹೆಚ್ಚು ಲಭಿಸಿದೆ ಎಂದು ತಿಳಿಸಿದ್ದಾರೆ.
ಕೆಪಿಸಿಸಿ ಪರಿಶಿಷ್ಟ ವಿಭಾಗ ರಾಜ್ಯ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು ವಿಧಾನಸಭೆಯಲ್ಲಿ ವಾಲ್ಕೀಕಿ ನಿಗಮದ ಹಗರಣ ಸರ್ಕಾರ ಸಮರ್ಥವಾಗಿ ಉತ್ತರ ಕೊಡುತ್ತದೆ ಎಂದರು.
ರಾಜ್ಯದಲ್ಲಿ ಸೇತುವೆ ಹಾನಿಯನ್ನು ಕೊಡಲೆ ದುರಸ್ತಿ ಮಾಡಲಾಗುವುದು. ಹಣದ ಕೊರತೆ ಇಲ್ಲ ಎಂದು ತಿಳಿಸಿದರು.
ರಾಷ್ಟ್ರೀಯ ಅಧ್ಯಕ್ಷ ಶಿವಾಜಿರಾವ್ ಮೋಗೆ ಮಾತನಾಡಿ ದೇಶದಲ್ಲಿ ೬ಕೋಟಿ ಪರಿಶಿಷ್ಟ ಪಂಗಡ ಸಮುದಾಯದ ಜನಸಂಖ್ಯೆ ಇದೆ, ಕಾಂಗ್ರೆಸ್ ಪಕ್ಷ ಪರಿಶಿಷ್ಟ ಪಂಗಡಕ್ಕೆ ಜಿಲ್ಲಾ, ಗ್ರಾಮ ಮತ್ತು ವಿಧಾನಸಭೆ, ಲೋಕಸಭೆ ಎಲ್ಲ ವಿಭಾಗದಲ್ಲಿ ಪರಿಶಿಷ್ಟ ಪಂಗಡಕ್ಕೆ ಅವಕಾಶ ನೀಡಿದೆ. ಕಾಂಗ್ರೆಸ್ ಪಕ್ಷಕ್ಕೆ ಪರಿಶಿಷ್ಚ ಪಂಗಡ ದೇಶಾದ್ಯಂತ ಸಂಪೂರ್ಣ ಬೆಂಬಲ ನೀಡುತ್ತಿದೆ ಸಂವಿಧಾನ ಬದ್ಧ, ಸಂವಿಧಾನ ರಕ್ಷಣೆಗೆ ಪ್ರಥಮ ಆದ್ಯತೆಯಾಗಿ ಕಾಂಗ್ರೆಸ್ ಪಕ್ಷ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಎಂ.ವಿಜಯನಾಯಕ್ ಮಾತನಾಡಿ ಕಾಂಗ್ರೆಸ್ ಪಕ್ಷ ಸಂವಿಧಾನ ರಕ್ಷಣೆ ಮತ್ತು ಸಂವಿಧಾನ ಬದ್ದವಾಗಿ ಜನರ ಹಿತಕಾಯುವ ಪಕ್ಷ.ಎಲ್ಲ ವರ್ಗ, ಧರ್ಮದವರಿಗೆ ಸರಿಸಮಾನ ಅವಕಾಶ ಕೊಟ್ಟು ಜಾತ್ಯತೀತ ರಾಷ್ಟ್ರ ನಿರ್ಮಾಣ ಮಹಾನ್ ಕೊಡುಗೆ ನೀಡಿದೆ ಎಂದರು.
ಮುಂಬರುವ ಬಿಬಿಎಂಪಿ ಮತ್ತು ಜಿಲ್ಲಾ ಪಂಚಾಯಿತ್ ನಿಗಮ, ಮಂಡಳಿಯಲ್ಲಿ ಪರಿಶಿಷ್ಟ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ಮನವಿ ಮಾಡಲಾವುದು ಎಂದು ಹೇಳಿದರು.
ಮಾಜಿ ಶಾಸಕ ಕೃಷ್ಣಮೂರ್ತಿ,ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಧರ್ಮಸೇನ, ಇಂಟಕ್ ಅಧ್ಯಕ್ಷ ಲಕ್ಷ್ಮಿವೆಂಕಟೇಶ್, ಸೇವಾದಳ ಅಧ್ಯಕ್ಷರಾಮಚಂದ್ರ, ಶೌಕತ್ ಅಲಿರವರು ಪರಿಶಿಷ್ಟ ಪಂಗಡ ವಿಭಾಗದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.