ಅತಿಯಾದ ಆತ್ಮವಿಶ್ವಾಸವೇ ಸೋಲಿಗೆ ಕಾರಣ
ಲಕ್ನೋ,ಜು.೧೫- ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗದಿರುವುದಕ್ಕೆ ಅತಿಯಾದ ಆತ್ಮವಿಶ್ವಾಸವೇ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ೨೦೨೭ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ಲಕ್ನೋದಲ್ಲಿ ನಡೆದ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಸದ್ಯದಲ್ಲಿಯೇ ನಡೆಯಲಿರುವ ವಿಧಾನಸಭೆ ಉಪ ಚುನಾವಣೆಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಸಕಲ ರೀತಿಯಲ್ಲಿ ಸಜ್ಜುಗೊಳ್ಳಿ ಅತಿಯಾದ ಆತ್ಮ ವಿಶ್ವಾಸ ಬಿಟ್ಟು ಗೆಲುವಿಗಾಗಿ ಶ್ರಮಿಸಿ ಎಂದು ಸೂಚಿಸಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ಪ್ರತಿಪಕ್ಷಗಳ ಮೇಲೆ ನಿರಂತರ ಒತ್ತಡವನ್ನು ಹೊಂದಿದ್ದೇವೆ ಮತ್ತು ಉತ್ತರ ಪ್ರದೇಶದಲ್ಲಿ ೨೦೧೪ ಮತ್ತು ೨೦೧೯ ರ ಲೋಕಸಭಾ ಚುನಾವಣೆಗಳು ಅಥವಾ ೨೦೧೭ ಮತ್ತು ೨೦೨೨ ರ ವಿಧಾನಸಭಾ ಚುನಾವಣೆಗಳು ಆಗಿರಬಹುದು ಇದರಿಂದ ನಿರೀಕ್ಷಿತ ಯಶಸ್ಸು ಸಾಧಿಸಿದ್ದೇವೆ ಎಂದಿದ್ದಾರೆ
ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿಯಾದ ಆತ್ಮವಿಶ್ವಾಸದಿಂದ ಎಲ್ಲಾ ಸ್ಥಾನಗಳನ್ನು ಗೆದ್ದು ಬೀಗುತ್ತೇವೆ ಎಂದು ಕಾರ್ಯಕರ್ತರು ಮತ್ತು ಮುಖಂಡರು ಭಾವಿಸಿದ್ದೇ ಅರ್ದಕ್ಕಿಂತ ಕಡಿಮೆ ಸ್ಥಾನ ಪಡೆಯಲು ಸಾಧ್ಯವಾಗಿದೆ. ಹೀಗಾಗಿ ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಮುನ್ನೆಡೆಯಬೇಕಾಗಿದೆ ಎಂದು ತಿಳಿಸಿದ್ದಾರೆ.
೨೦೨೪ ರಲ್ಲಿ ಬಿಜೆಪಿ ಶೇಕಡಾವಾರು ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಮತಗಳ ಪಲ್ಲಟ ಮತ್ತು ಅತಿಯಾದ ಆತ್ಮವಿಶ್ವಾಸ ನಿರೀಕ್ಷೆಗಳನ್ನು ಘಾಸಿಗೊಳಿಸಿತು. ಪರಿಣಾಮವಾಗಿ ಹಿಂದಿನ ಚುನಾವಣೆಯಲ್ಲಿ ಸೋತಿದ್ದ ಪ್ರತಿಪಕ್ಷಗಳು ಇಂದು ಎದೆಗುಂದುವಂತೆ ಮಾಡಲು ಸಾಧ್ಯವಾಗಿದೆ ಎಂದಿದ್ದಾರೆ