ಹಳೇ ಪಿಂಚಣಿ ಜಾರಿಗೆ ಆಗ್ರಹ
ಕೆ.ಆರ್.ಪುರ,ಜು.೧೩- ಏಳನೇಯ ವೇತನ ಆಯೋಗದ ವರದಿ ಯಥಾವತ್ತಾಗಿ ಜಾರಿಗೊಳಿಸುವದು, ಹಳೆ ಪಿಂಚಣಿ ಯೋಜನೆ ಜಾರಿಗೆ ತರುವುದು ಸೇರಿ ದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಶೀಲ್ದಾರವರಿಗೆ ಮನವಿಯನ್ನು ಸಲ್ಲಿಸಲಾಗಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಬೆಂಗಳೂರು ಪೂರ್ವ ತಾಲೂಕು ಅದ್ಯಕ್ಷ ಶ್ರೀಶೈಲ ಕನ್ನಾಳ್ ಅವರು ತಿಳಿಸಿದರು.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನಿರ್ದೇಶನದ ಮೇರೆಗೆ ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ ವಿವಿಧ ವೃಂದ ಸಂಘಗಳ ಸಹಕಾರ ದೊಂದಿಗೆ ನೂತನವಾಗಿ ಬೆಂಗಳೂರು ಪೂರ್ವ ತಾಲೂಕು ದಂಡಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿರುವ ರಾಜೀವ್ ರವರನ್ನು ಸನ್ಮಾನಿಸಿ, ಮನವಿಯನ್ನು ಸಲ್ಲಿಸಿ ಮಾತನಾಡಿದರು. ರಾಜ್ಯ ಸರಕಾರಿ ನೌಕರರ ಸಂಘವು ರಾಷ್ಟ್ರ ಹಾಗೂ ರಾಜ್ಯದಲ್ಲಿ ಸಂಭವಿಸುವ ಪ್ರಕೃತಿ ವಿಕೋಪ , ಉತ್ತರ ಕರ್ನಾಟಕದ ಪ್ರವಾಹ , ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಆರ್ಥಿಕ ಸಹಕಾರ ನೀಡಿ ಸೇವಾ ಕಾರ್ಯನಿರ್ವಹಿಸುವ ಮೂಲಕ ದೇಶದಲ್ಲಿಯೇ ಮಾದರಿ ಸಂಘಟನೆಯಾಗಿದೆ. ರಾಜ್ಯದಲ್ಲಿ ೨.೬೦ ಲಕ್ಷ ಸರಾಸರಿ ಹುದ್ದೆಗಳು ಖಾಲಿಯಿದ್ದರೂ ಸಹ ಸರ್ಕಾರವು ಜನ ಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿ ಸುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲು ಪಿಸುವ ಕಾರ್ಯದ ಜೊತೆ ರಾಜ್ಯದ ಅಭಿವೃದ್ಧಿ ಸೂಚ್ಯಂಕದ ಬೆಳವಣಿಗೆಯಲ್ಲಿ ಹಾಗೂ ಜಿ.ಎಸ್.ಟಿ. ತೆರಿಗೆ ಸಂಗ್ರಹಣೆ ಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಆದರೆ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಸರಕಾರಿ ನೌಕರರ ಬೇಡಿಕೆಗಳ ನ್ನು ಈಡೇರಿಸಲು ವಿಪಲವಾಗಿದೆ. ನಮ್ಮ ಪ್ರಮುಖ ಬೇಡಿಕೆಗಳಾದ ೭ ನೇಯ ವೇತನ ಆಯೋಗದ ವರದಿ ಯಥಾವತ್ತಾಗಿ ಜಾರಿಗೊಳಿ ಸುವುದು, ಹೊಸ ಪಿಂಚಣಿ ಯೋಜನೆ ರದ್ದು ಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರುವುದು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸುವುದು. ಈ
ಕುರಿತು ಜೂಲೈ ಕೊನೆಯ ವಾರ ಮುಷ್ಕರ ಕೈಗೊಳ್ಳುವ ವಿಚಾರ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಹಿಡೇರಿಸುವಂತೆ ಆಗ್ರಹಿಸಿ
ಸರ್ಕಾರಕ್ಕೆ ತಾಲ್ಲೂಕು ದಂಡಾಧಿಕಾರುಗಳ ಮೂಲಕ ಮನವಿಯನ್ನು ಸಲ್ಲಿಸಲಾಯಿತು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸರಕಾರಿ ನೌಕರರ ಸಂಘ ಪೂರ್ವ ತಾಲೂಕು ಅದ್ಯಕ್ಷರಾದ ಶ್ರೀಶೈಲ ಕನ್ನಾಳ್, ಕಾರ್ಯಧರ್ಶಿ ಆರ್.ಎಲ್.ಗಿರಿರಾಜು, ಕೋಶಾಧ್ಯಕ್ಷ ಎನ್.ವೆಂಕಟಪ್ಪ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಆರ್. ಗುರುರಾಜ್ ಸೇರಿದಂತೆ ಪೂರ್ವ ತಾಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗು ಅಧಿಕಾರಿಗಳು ಹಾಜರಿದ್ದರು.