ಭಾರತೀಯ ಯೋಧರ ವಾಪಸ್ಸಿಗೆ ಪುಟಿನ್ ಒಪ್ಪಿಗೆ
ಮಾಸ್ಕೋ,ಜು.೯- ರಷ್ಯಾದ ಸೇನೆಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಭಾರತೀಯರನ್ನು ತಾಯ್ನಾಡಿಗೆ ಕಳುಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನೇತೃತ್ವದ ಸರ್ಕಾರ ನಿರ್ಧರಿಸಿದೆ.
ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಖಾಸಗೀ ಔತಣಕೂಟಕ್ಕೂ ಮುನ್ನ ರಷ್ಯಾ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ,
ರಷ್ಯಾ ಸರ್ಕಾರದ ಈ ಕ್ರಮದಿಂದ ಹಲವು ವರ್ಷದಿಂದ ರಷ್ಯಾ ಸೇನೆಯಲ್ಲಿ ಕೆಲಸ ಮಾಡುತ್ತಿರುವ ಭಾರತೀಯರು ತಮ್ಮ ತಾಯ್ನಾಡಿಗೆ ವಾಪಾಸ್ಸಗಲು ಅನುವು ಮಾಡಿಕೊಡಲಾಗುತ್ತಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಖಾಸಗಿ ಔತಣಕೂಟಕ್ಕೆ ಆತಿಥ್ಯ ವಹಿಸಿದ್ದರು.
ದೇಶದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರ ಗದ್ಡುಗೆ ವಹಿಸಿಕೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ರಷ್ಯಾ ಪ್ರವಾಸ ಕೈಗೊಂಡಿದ್ದು ಅಲ್ಲಿನ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಜಾಗತಿಕ, ಪ್ರಾದೇಶಿಕ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.