ಗಂಗೂಲಿಗೆ ಹುಟ್ಟುಹಬ್ಬದ ಸಂಭ್ರಮ
ಕೊಲ್ಕತ್ತಾ,ಜು.೮-ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಇಂದು (ಜುಲೈ ೮) ೫೨ ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಸೌರವ್ ಗಂಗೂಲಿ ಅವರ ದಾದಾಗಿರಿ ಕಥೆಗಳು ಅಭಿಮಾನಿಗಳ ಮನದಲ್ಲಿ ನೆಲೆಯೂರಿವೆ.ಅಭಿಮಾನಿಗಳು ಅವರನ್ನು ಪ್ರೀತಿಯಿಂದ ದಾದಾ ಎಂದೇ ಕರೆಯುತ್ತಾರೆ.
ಆದರೆ, ರಾಷ್ಟ್ರೀಯ ತಂಡದ ಮಾಜಿ ನಾಯಕ ಹಾಗೂ ಭಾರತ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷರು ಈ ಬಾರಿ ಕೋಲ್ಕತ್ತಾದಲ್ಲಿಲ್ಲ. ಅವರು ತಮ್ಮ ಹುಟ್ಟುಹಬ್ಬವನ್ನು ಲಂಡನ್‌ನಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ ಸೌರವ್ ಜುಲೈ ೩ ರಂದು ಕೋಲ್ಕತ್ತಾದಿಂದ ಲಂಡನ್‌ಗೆ ತೆರಳಿದ್ದಾರೆ. ಜುಲೈ ೪, ೫ ಮತ್ತು ೬ ರಂದು ಲಂಡನ್‌ನಲ್ಲಿ ಎಂಸಿಸಿ ಸಭೆ ನಡೆದಿದೆ. ಸೌರವ್ ಎಂಸಿಸಿಯ ಕ್ರಿಕೆಟ್ ಸಮಿತಿಯಲ್ಲಿದ್ದಾರೆ. ಆ ಸಭೆಯಲ್ಲಿ ಭಾಗವಹಿಸಿದ್ದಾರೆ. ಮಗಳು ಸನಾ ಈಗ ಲಂಡನ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಸನಾ ಕೆಲಸ ಮಾಡುತ್ತಿರುವ ಕಂಪನಿಯ ಕಾರ್ಯಕ್ರಮವೊಂದರಲ್ಲಿ ಸೌರಭ್ ಕೂಡ ಭಾಗವಹಿಸಿದ್ದಾರೆ. ಸದ್ಯಕ್ಕೆ ಅವರು ವಿದೇಶದಲ್ಲಿ ಕೆಲ ದಿನ ಕಳೆಯಲಿದ್ದಾರೆ
ಸೌರವ್ ಗಂಗೂಲಿಯನ್ನು ಪ್ರಿನ್ಸ್ ಆಫ್ ಕೋಲ್ಕತ್ತಾ, ಲಾರ್ಡ್ ಆಫ್ ದಿ ಆಫ್ ಸೈಡ್, ಬೆಂಗಾಲ್ ಟೈಗರ್ ಮುಂತಾದ ಹೆಸರುಗಳಿಂದ ಕರೆಯಲಾಗುತ್ತದೆ.
ಕ್ರಿಕೆಟ್ ಮೆಕ್ಕಾ ಎಂದು ಕರೆಯಲ್ಪಡುವ ಲಾರ್ಡ್ಸ್‌ನಲ್ಲಿ ಟೆಸ್ಟ್ ಪಂದ್ಯದ ಮೂಲಕ ಚೊಚ್ಚಲ ಪಂದ್ಯಗೆ ಪಾದಾರ್ಪಣೆ ಮಾಡಿದ್ದಾರೆ.ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಶತಕ ಬಾರಿಸಿದ್ದಾರೆ.
ಅವರು ತಮ್ಮ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಎರಡು ವಿಕೆಟ್ ಪಡೆದಿದ್ದಾರೆ. ಅವರ ನಾಯಕತ್ವದಲ್ಲಿ ಹಲವು ಪಂದ್ಯಗಳನ್ನು ಗೆದ್ದಿದ್ದಿದೆ. ದೇಶವಲ್ಲದೆ ವಿದೇಶದಲ್ಲೂ ಈ ಸಾಧನೆ ಮಾಡಿದ್ದಾರೆ
ವೀರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್, ಯುವರಾಜ್ ಸಿಂಗ್ ಅವರಂತಹ ಸ್ಟಾರ್ ಕ್ರಿಕೆಟಿಗರ ವೃತ್ತಿಜೀವನವನ್ನು ರೂಪಿಸುವಲ್ಲಿ ’ದಾದಾ’ ಪ್ರಮುಖ ಪಾತ್ರ ವಹಿಸಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಕೂಡ ಗಂಗೂಲಿ ನಾಯಕತ್ವದಲ್ಲಿ ಕ್ರಿಕೆಟ್ ಲೋಕಕ್ಕೆ ಪದಾರ್ಪಣೆ ಮಾಡಿದ್ದಾರೆ.