ಉಪ ಲೋಕಾಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲರು
ಬೆಂಗಳೂರು.ಜು.೭- ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರಿಗೆ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು. ಗೌರವಾನ್ವಿತ ಶ್ರೀ ನ್ಯಾಯಾಮೂರ್ತಿ ಬಿ.ವೀರಪ್ಪ ಅವರು ಉಪಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೌರವಾನ್ವಿತ ನ್ಯಾಯಾಮೂರ್ತಿ ಲೋಕಾಯುಕ್ತ ಬಿ ಎಸ್ ಪಾಟೀಲ್, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.