ಅತ್ಯಾಕರ್ಷಕ ಪ್ರೋಟೋಟೈಪ್ ಬಸ್ ವೀಕ್ಷಿಸಿದ ರಾಮಲಿಂಗಾರೆಡ್ಡಿ
ಬೆಂಗಳೂರು.ಜು.೬- ವಿನೂತನ ೯೬೦೦ ವೋಲ್ವೊ ಮಲ್ಟಿ ಆಕ್ಸೆಲ್ ಸೀಟರ್ ಪ್ರೋಟೋಟೈಪ್ ಬಸ್ಸನ್ನು ಇಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಇಂದು ಪರಿವೀಕ್ಷಣೆ ನಡೆಸಿದರು.
೯೬೦೦ ವೋಲ್ವೊ ಮಲ್ಟಿ ಆಕ್ಸೆಲ್ ವಿಶೇಷತೆಗಳು
ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್‌ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ (ಆಖಐ) ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿದ್ದು ಕಣ್ಣಿಗೆ ಮುದ ನೀಡುವ ಸೌಂದರ್ಯ ಹೊಂದಿದೆ.
ಏರೋಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ.ನವೀನ ತಂತ್ರಜ್ಙಾನ/ತಾಂತ್ರಿಕತೆಯಿಂದ ಸುಧಾರಿತ ಇಂಜಿನ್ ಹೊಂದಿದ್ದು ಅತ್ಯುತ್ತಮ ಕಾರ್ಯಕ್ಷಮತೆ ಹಾಗೂ ಸುಧಾರಿತ ಇಂಜಿನ್ ಕೆಎಂಪಿಎಲ್ ನೀಡುತ್ತದೆ. ಬಸ್ಸಿನ ಉದ್ದದಲ್ಲಿ ೩.೫% ಹೆಚ್ಚಳ ಇರುವುದರಿಂದ ಸಲೂನ್‌ನಲ್ಲಿ ಪ್ರಯಾಣಿಕರ ಆಸನಗಳ ನಡುವಿನ ಅಂತರ ಹೆಚ್ಚಾಗಿದೆ.
ಬಸ್ಸಿನ ಎತ್ತರದಲ್ಲಿ ೫.೬% ಹೆಚ್ಚಳ ಇರುವುದರಿಂದ ಹೆಚ್ಚಿನ ಹೆಡ್ ರೂಂ ಇರುತ್ತದೆ.ವಿಂಡ್‌ಶೀಲ್ಡ್ ಗಾಜು ೯.೫% ರಷ್ಟು ವಿಸ್ತಾರವಾಗಿದ್ದು, ಚಾಲಕನಿಗೆ ಗೋಚರತೆಯನ್ನು ಹೆಚ್ಚಿಸಿ ಬ್ಲೈಂಡ್ ಸ್ಪಾಟ್ ಅನ್ನು ಕಡಿಮೆ ಮಾಡುತ್ತದೆ.ವಿಶಾಲ ಲಗೇಜ್ ಸ್ಥಳಾವಕಾಶವಿದ್ದು ಶೇ.೨೦% ರಷ್ಟು ಹೆಚ್ಚಿನ ಲಗ್ಗೇಜ್ ಇಡುವ ಸೌಲಭ್ಯವಿದೆ.
ಯುಎಸ್‌ಬಿ + ಸಿ ಟೈಪ್ ನಂತಹ ಹೊಸ ಜನರೇಷನ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಒಳಗೊಂಡಿದೆ.ವಿಶಾಲವಾದ ಎಸಿ ಡಕ್ಟ್ ಹೊಂದಿರುವುದರಿಂದ ವಾಹನದ ಒಳಗೆ ಉತ್ತಮ ಹವಾನಿಯಂತ್ರಣಾ ವ್ಯವಸ್ಥೆ ಇರುತ್ತದೆ.ಉನ್ನತ ದರ್ಜೆ, ವಿನ್ಯಾಸದ ಆಸನಗಳು ಮತ್ತು ಸಾಮಗ್ರಿಗಳ ಬಳಕೆಯಿಂದ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಸೌಕರ್ಯ ಹೊಂದಿದೆ.
ವಿಶಾಲವಾದ ಪ್ಯಾಂಟೋಗ್ರಾಫಿಕ್ ವಿನ್ಯಾಸದಿಂದ ವಾಹನದ ನಿರ್ವಹಣೆ ಕೈಗೊಳ್ಳಲು ಸುಲಭವಾಗಿರುತ್ತದೆ.ಹಿಂಭಾಗದಲ್ಲಿ ಫಾಗ್ ಲೈಟ್ ಅನ್ನು ಒಳಗೊಂಡಿರುವುದಿರಂದ ರಾತ್ರಿ ವೇಳೆಯಲ್ಲಿ ಹೆಚ್ಚಿನ ಸುರಕ್ಷತೆ ಹೊಂದಿದೆ.
ಸುಲಭವಾಗಿ ಕೈಗೆಟುಕುವ ಚಾಲಕ ನಿಯಂತ್ರಣಗಳು ಮತ್ತು ಸ್ವಿಚ್‌ಗಳನ್ನು ಹೊಂದಿದ್ದು ಚಾಲಕರಿಗೆ ಹೆಚ್ಚು ಅನುಕೂಲಕರವಾಗಿರುತ್ತದೆ.ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (ಎಫ್‌ಎಪಿಎಸ್) ಅಳವಡಿಸಿದ್ದು ತುರ್ತು ಸಂದರ್ಭದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಇದೆ. ಬಸ್ಸಿನ ಒಳಗೆ ಪ್ರಯಾಣಿಕರ ಆಸನದ ಎರಡೂ ಬದಿಯಲ್ಲಿ ನೀರಿನ ಪೈಪುಗಳಿದ್ದು ೩೦ ನಾಜ಼ಲ್‌ಗಳಿಂದ ನೀರು ಸರಬರಾಜು ಆಗಿ ಬೆಂಕಿ ಅವಘಡದ ಸಂದರ್ಭದಲ್ಲಿ ನೀರು ಸಿಂಪಡಿಸಲು ಪ್ರಾರಂಭವಾಗುತ್ತದೆ.ಚಾಲಕರು ಪಾದಚಾರಿಯನ್ನು ಪ್ರಯಾಣಿಕರ ಬಾಗಿಲಿನಿಂದ ಸುಲಭವಾಗಿ ನೋಡಬಹುದಾಗಿದ್ದು ಪಾದಾಚಾರಿಗಳಿಗೆ ಹೆಚ್ಚಿನ ಸುರಕ್ಷತೆ ಒದಗಿಸಲಾಗಿದೆ.
ಸಾರಿಗೆ ಸಚಿವರು ಈ ಬಸ್ಸನ್ನು ವೀಕ್ಷಿಸಿ ಬಹುಮೆಚ್ಚುಗೆ ಸೂಚಿಸಿದರು. ಪ್ರಯಾಣಿಕರ ಬೇಡಿಕೆಗನುಣವಾಗಿ ಸೇರ್ಪಡೆ ಗೊಳಿಸುತ್ತಿರುವುದರಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಈ ಸಂದರ್ಭದಲ್ಲಿ ಸಂತಸ ವ್ಯಕ್ತಪಡಿಸಿದರು.