ಅಗ್ನಿವೀರರಿಗೆ ನ್ಯಾಯ ಕೊಡಿಸಲು ಮೋದಿ ವಿಫಲ
ನವದೆಹಲಿ,ಜು.೬- ದೇಶಕ್ಕಾಗಿ ಪ್ರಾಣ ಕಳೆದುಕೊಂಡ ಅಗ್ನಿವೀರರನ್ನು ನ್ಯಾಯಸಮ್ಮತವಾಗಿ ನಡೆಸಿಕೊಳ್ಳುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೋಮ್ಮೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕಳೆದ ಜನವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ ಅಗ್ನಿವೀರ್ ಅಜಯ್ ಕುಮಾರ್ ಅವರ ಕುಟುಂಬ ಇನ್ನೂ ಯಾವುದೇ ಪರಿಹಾರ ಪಡೆದಿಲ. “ಪರಿಹಾರ ಮತ್ತು ವಿಮೆ ನಡುವೆ ವ್ಯತ್ಯಾಸವಿದೆ” ಎನ್ನುವುದನ್ನು ಕೇಂದ್ರ ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಅದನ್ನು ಬಿಟ್ಟು ಜನರನ್ನು ದಾರಿತಪ್ಪಿಸುವ ಹೇಳಿಕೆ ಸಲ್ಲದು ಎಂದಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು “ಹುತಾತ್ಮ ಅಗ್ನಿವೀರ್ ಅಜಯ್ ಕುಮಾರ್ ಅವರ ಕುಟುಂಬ ಇಲ್ಲಿಯವರೆಗೆ ಸರ್ಕಾರದಿಂದ ಯಾವುದೇ ಪರಿಹಾರ ಪಡೆದಿಲ್ಲ. ‘ಪರಿಹಾರ’ ಮತ್ತು ‘ವಿಮೆ’ ನಡುವೆ ವ್ಯತ್ಯಾಸವಿದೆ; ವಿಮಾ ಕಂಪನಿಯಿಂದ ಮಾತ್ರ ಹುತಾತ್ಮರ ಕುಟುಂಬಕ್ಕೆ ಪಾವತಿ ಮಾಡಲಾಗಿದೆ ಎಂದಿದ್ದಾರೆ.
ಹೀಗಿರುವಾಗ ಅಜಯ್ ಕುಮಾರ್ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ ಎಂದು ರಕ್ಷಣಾ ಸಚಿವರು ಸೇರಿದಂತೆ ಕೇಂದ್ರ ಸರ್ಕಾರದ ಸಚಿವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದ್ದಾರೆ
ಹುತಾತ್ಮ ಯೋಧ ಅಜಯ್ ಕುಮಾರ್ ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ನೆರವು ಸಿಕ್ಕಿಲ್ಲ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡುವ ಪ್ರತಿಯೊಬ್ಬ ಹುತಾತ್ಮರ ಕುಟುಂಬವನ್ನು ಗೌರವಿಸಬೇಕು ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅವರ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ
ಕೇಂದ್ರ ಸರ್ಕಾರ ಏನೇ ಹೇಳಲಿ, ಇದು ರಾಷ್ಟ್ರೀಯ ಭದ್ರತೆಯ ವಿಷಯ ಅದನ್ನು ಸಂಸತ್ತಿನಲ್ಲಿ ಮತ್ತೆ ವಿಷಯ ಪ್ರಸ್ತಾಪ ಮಾಡುತ್ತೇನೆ, ಸಮ್ಮಿಶ್ರ ಪಡೆಗಳನ್ನು ದುರ್ಬಲಗೊಳಿಸಲು ಭಾರತ ಎಂದಿಗೂ ಅನುಮತಿಸುವುದಿಲ್ಲ ಎಂದು ಹೇಳಿದ್ದಾರೆ
ಹುತಾತ್ಮ ಅಗ್ನಿವೀರ್ ಕುಟುಂಬಕ್ಕೆ ನೀಡಿದ ನೆರವಿನ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನಲ್ಲಿ ಸುಳ್ಳು ಹೇಳಿದ್ದಾರೆ. ಹುತಾತ್ಮ ಯೋಧ ಅಗ್ನಿವೀರ್ ಅಜಯ್ ಅವರ ತಂದೆಯೇ ಸತ್ಯವನ್ನು ಹೇಳಿದ್ದಾರೆ ಮತ್ತು ಅವರ ಸುಳ್ಳುಗಳನ್ನು ಬಹಿರಂಗಪಡಿಸಿದ್ದಾರೆ. ರಕ್ಷಣಾ ಸಚಿವರು ಸಂಸತ್ತು, ದೇಶ, ಸೇನೆ ಮತ್ತು ಹುತಾತ್ಮರ ಕುಟುಂಬಕ್ಕೆ ಕ್ಷಮೆ ಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.