ದರ್ಶನ್ ಗ್ಯಾಂಗ್ ಗೆ‌ ಜು.18ರವರೆಗೆ ನ್ಯಾಯಾಂಗ ಬಂಧನ
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲ ಆರೋಪಿಗಳಿಗೆ ಜುಲೈ 18ರವರೆಗೆ ನ್ಯಾಯಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಎಲ್ಲ‌ ಆರೋಪಿಗಳ ಜಾಮೀನು ಅಂತ್ಯಗೊಂಡ ಹಿನ್ನೆಲೆಯಲ್ಲಿ ಗುರುವಾತ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ರಿಮ್ಯಾಂಡ್ ಅರ್ಜಿ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರ್ಥಿಕ ಅಪರಾಧಗಳ ಕೋರ್ಟಿಗೆ‌ ಅರ್ಜಿ ಸಲ್ಲಿಸಿರುವುದರಿಂದ ಜು.18 ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದರು.
ಹೀಗಾಗಿ ನಟ ದರ್ಶನ್, ಪವಿತ್ರಗೌಡ ಮತ್ತಿತರರಿಗೆ ಜೈಲುವಾಸ‌ ಅನಿವಾರ್ಯವಾಗಿದೆ.
ಇದೇ ವೇಳೆ ತುಮಕೂರು ಜೈಲಿನಲ್ಲಿರುವ ಇತರ‌‌ ನಾಲ್ವರು ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.ನ್ಯಾಯಾಧೀಶರು ಎಲ್ಲರ ಹೆಸರು ಕರೆಯುತ್ತಿದ್ದಂತೆಯೇ ಕೈಎತ್ತಿ ಹಾಜರಿ ಖಾತರಿಪಡಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆರೋಪಿ ಗಳಿಗೂ ನ್ಯಾಯಾಂಗ ಬಂಧನ ಅವಧಿ ವಿಸ್ತರಣಯಾಗಿದ್ದು, ಸದ್ಯಕ್ಕೆ ಜೈಲುವಾಸ ಖಾತ್ರಿಯಾಗಿದೆ.