ಡೆಂಗ್ಯೂ ಟೆಸ್ಟ್ ಗೆ ಬೆಲೆ ನಿಗದಿಪಡಿಸಿದ ಸರ್ಕಾರ
ಬೆಂಗಳೂರು, ಜು.3- ದಿನೇ ದಿನೇ ಡೆಂಗ್ಯೂ ಜ್ವರ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆ ಹಿನ್ನೆಲೆ ಡೆಂಗ್ಯೂ ಟೆಸ್ಟಿಂಗ್ ಗೆ ರಾಜ್ಯ ಸರ್ಕಾರ ಬೆಲೆ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ‌.
ಎರಡು ರೀತಿಯ ಟೆಸ್ಟಿಂಗ್ ಗಳಿಗೆ ಒಟ್ಟು 600 ರೂ. ದರ ನಿಗದಿ ಮಾಡಿ ಆದೇಶಿಸಿದೆ. NS1 ಹಾಗೂ Igm ಎರಡು ಟೆಸ್ಟಿಂಗ್ ಗಳಿಗೆ ತಲಾ 300 ರೂ ಗಳನ್ನ ನಿಗದಿಪಡಿಸಲಾಗಿದೆ.
ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬ್ ರೋಟರಿಗಳು ಡೆಂಗಿ ಟೆಸ್ಟಿಂಗ್ ಮಾಡಲು 600 ರೂಪಾಯಿಗಿಂತ ಹೆಚ್ಚು ವಿಧಿಸುವಂತಿಲ್ಲ.
ಡೆಂಗ್ಯೂ ನಿಯಂತ್ರಣ ಮುಂಜಾಗೃತ ಕ್ರಮಗಳ ಕುರಿತು ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಗುರುವಾರ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ವಿಡಿಯೋ ಕಾನ್ಫರೆನ್ಸ್ ಸಭೆ ಕರೆದಿದ್ದಾರೆ.
ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒ, ನಗರ ಸ್ಥಳೀಯ ಸಂಸ್ಥೆಗಳು, ಡೆಂಗಿ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕ್ರಮಗಳತ್ತ ಹೆಚ್ಚಿನ ಗಮನ ಹರಿಸಬೇಕಾಗಿದ್ದು, ಈ ನಿಟ್ಡಿನಲ್ಲಿ ಮಹತ್ವದ ಸಭೆ ಕರೆದಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡೆಂಗಿ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಕೈಗೊಂಡಿರುವ ಮುಂಜಾಗೃತ ಕ್ರಮಗಳ ಕುರಿತು ಪರಾಮರ್ಶೆ ನಡೆಸಲಿದ್ದಾರೆ.
ಅಲ್ಲದೆ, ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗಿ‌ ಜ್ವರ ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.