ಜಾರ್ಖಾಂಡ್ ಸಿಎಂ ಚಂಪೈ ಸೊರೇನ್ ರಾಜೀನಾಮೆ:ಹೊಸ ಸರ್ಕಾರ‌ ರಚನೆಗೆ ಹಕ್ಕು ಮಂಡನೆ
ರಾಂಚಿ,ಜು.3- ಮಹತ್ವದ ಬೆಳವಣಿಗೆಯಲ್ಲಿ ಜಾರ್ಖಾಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜಭವನದಲ್ಲಿ ರಾಜಭವನದಲ್ಲಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು
ಹಕ್ಕು ಮಂಡನೆ:
ಚಂಪೈ ಸೊರೇನ್ ‌ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವತು ಹೊಸ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುವಂತೆ ರಾಜ್ಯಪಾಲರಿಗೆ ಹಕ್ಕು ಮಂಡಿಸಿದರು.
ಈ ವೇಳೆ ಮುಖ್ಯಮಂತ್ರಿ ಚಂಪೈ ಸೊರೇನ್, ಸೇರಿದಂತೆ ಕಾಂಗ್ರೆಸ್, ಆರ್ ಜೆಡಿ ಮತ್ತು ಜೆಎಂಎಂ ನಾಯಕರು ಉಪಸ್ಥಿತರಿದ್ದರು
ಇದಕ್ಕೂ ಮುನ್ನ ಹೇಮಂತ್ ಸೊರೇನ್ ಅವರು ಮಿತ್ರ ಪಕ್ಷಗಳ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು. ಜೊತೆಗೆ ಎಲ್ಲರೂ ಜೊತೆಯಾಗಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ಖಾರ್ಜಾಂಡ್ ಮುಖ್ಯಮಂತ್ರಿ ಯಾಗಿದ್ದ ಹೇಮಂತ್ ಸೊರೇನ್ ಅವರನ್ನು ರಕ್ಷಣಾ ಭೂಮಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ‌ ನಿರ್ದೇಶನಾಲಯ ಬಂಧಿಸಿದ್ದ ಹಿನ್ನೆಲೆಯಲ್ಲಿ ಜನವರಿ 31 ರಂದು ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು
ಆ ಬಳಿಕ ಚಂಪೈ ಸೊರೇನ್ ಅವರನ್ನು ಮುಖ್ಯಮಂತ್ರಿ ಮಾಡಲಾಗಿತ್ತು. ಜೈಲಿನಲ್ಲಿದ್ದ ಹೇಮಂತ್ ಸೊರೇನ್ ಅವರಿಗೆ ಜಾಮೀನು ಸಿಕ್ಕಿ ಜೈಲಿನಿಂದ ಹೊರ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಚಂಪೈ ಸೊರೇನ್ , ತಮ್ಮ ನಾಯಕನಾಗಿ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ದಾರೆ.
ನಾಯಕನಾಗಿ ತ್ಯಾಗ:
ತಮ್ಮ ಪಕ್ಷದ ನಾಯಕ ಹೇಮಂತ್ ಸೊರೇನ್ ಅವರಿಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಮುಖ್ಯಮಂತ್ರಿ ಚಂಪೈ ಸೊರೇನ್ ಹೇಳಿದ್ದಾರೆ.
ತಾವು ಮುಖ್ಯಮಂತ್ರಿ ಯಾಗಿದ್ದುದು ತಾತ್ಕಾಲಿಕವಾಗಿತ್ತು. ಹೇಮಂಥ ಸೊರೇನ್ ಅವರು ಮರಳಿ ಬಂದ ಹಿನ್ನೆಲೆಯಲ್ಲಿ ತಮ್ಮ ನಾಯಕ ಇನ್ನು ಮುಂದೆ ಮುಖ್ಯಮಂತ್ರಿ ಯಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ