ಜುಲೈ 5 ಮಂಡ್ಯದಲ್ಲಿ ಹೆಚ್‌ಡಿಕೆ ಜನತಾದರ್ಶನ
ಬೆಂಗಳೂರು, ಜು. ೩- ಕೇಂದ್ರ ಬೃಹತ್ ಕೈಗಾರಿಕಾ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರ ಸ್ವಾಮಿ ಜುಲೈ ೫ ರಂದು ಮಂಡ್ಯದಲ್ಲಿ ಜನತಾ ದರ್ಶನ ನಡೆಸಲಿದ್ದಾರೆ.
ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ ೧೦ ಗಂಟೆಯಿಂದ ಜನತಾ ದರ್ಶನ ನಡೆಸಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮಂಡ್ಯ ಜಿಲ್ಲಾಧಿಕಾರಿಗೆ ಸಚಿವರ ಆಪ್ತ ಕಾರ್ಯದರ್ಶಿ ಪತ್ರ ಬರೆದಿದ್ದಾರೆ.
ಈ ಹಿಂದೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ನಡೆಸಿದ್ದ ಜನತಾ ದರ್ಶನ ಮೆಚ್ಚಿಗೆಗೆ ಪಾತ್ರವಾಗಿತ್ತು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿದ್ದಾರೆ.ಅಧಿಕಾರಿ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕುಮಾರ ಸ್ವಾಮಿ ಜನತಾ ದರ್ಶನ ನಡೆಸುತ್ತಿದ್ದಾರೆ.
ಜನತಾ ದರ್ಶನದಲ್ಲಿ ಜಿಲ್ಲೆಯ ಜನರಿಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲೇ ಪರಿಹಾರ ಒದಗಿಸಲಿದ್ದಾರೆ.