ಸಿಸಿಬಿ ದಾಳಿ: 138 ಕೋಟಿ ನಕಲಿ ಬಟ್ಟೆ ಜಪ್ತಿ
ಬೆಂಗಳೂರು,ಜು.೨-ಪೂಮಾ,ನೈಕಿ,ಅಡಿದಾಸ್ ಸೇರಿದಂತೆ ಪ್ರತಿಷ್ಠಿತ ಕಂಪನಿಗಳ ಬಟ್ಟೆಗಳನ್ನು ನಕಲು ಮಾಡಿ ಅಸಲು ಮಾಲುಗಳೆಂದು ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ದಿಢೀರ್ ದಾಳಿ ನಡೆಸಿರುವ ಸಿಸಿಬಿ ಪೊಲೀಸರು೧.೩೮ ಕೋಟಿ ಮೌಲ್ಯದ ನಕಲಿ ಬಟ್ಟೆಗಳನ್ನು ಜಪ್ತಿ ಮಾಡಿದ್ದಾರೆ.
ಪ್ರತಿಷ್ಠಿತ ಕಂಪನಿಗಳ ನಕಲಿ ಬಟ್ಟೆಗಳ ಮಾರಾಟ ದಂಧೆ ನಡೆಸುತ್ತಿದ್ದ ರಾಜರಾಜೇಶ್ವರಿನಗರದ ಬಿಇಎಂಎಲ್ ಲೇಔಟ್ ನ ಆರೋಪಿ ನರಸಿಂಹರಾಜು(೩೮) ನನ್ನು ಬಂಧಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರಾಜರಾಜೇಶ್ವರಿನಗರ ಪೊಲೀಸ್ ಠಾಣೆ ಸರಹದ್ದಿನ ಬಿಇಎಂಎಲ್ ಲೇಔಟ್ ನ ಅಂಗಡಿಯೊಂದರಲ್ಲಿ ಪೂಮಾ,ನೈಕಿ, ಅಡಿದಾಸ್ ಸೇರಿದಂತೆ ಪ್ರತಿಷ್ಠಿತ
ಕಂಪನಿಯ ಹೆಸರಿನಲ್ಲಿ ನಕಲು ಬಟ್ಟೆಗಳನ್ನು ದಾಸ್ತಾನು ಮಾಡಿ ಅಸಲಿ ಮಾಲುಗಳೆಂದು ಸಾರ್ವಜನಿಕರಿಗೆ ನಂಬಿಸಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತನಿಂದ ೧,೩೮,೯೨,೩೩೨ ಮೌಲ್ಯದ ನಕಲಿ ಬಟ್ಟೆಗಳನ್ನು ವಶಪಡಿಸಿಕೊಂಡು
ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಕಾಫಿರೈಟ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.