ಮೊಸಳೆ ಪ್ರತ್ಯಕ್ಷ: ಬೆಚ್ಚಿಬಿದ್ದ ಜನ
ಮಹಾರಾಷ್ಟ್ರ.ಜು.೧-ಕಳೆದ ಮೂರ್ನಾಲ್ಕು ದಿನಗಳಿಂದ ಸುರಿದ ಭಾರೀ ಮಳೆಗೆ ಮಹಾನಗರಗಳು ಜಲಾವೃತಗೊಂಡಿವೆ. ಮಹಾರಾಷ್ಟ್ರದ ರತ್ನಗಿರಿಯ ಚಿಪ್ಲೂನ್ ರಸ್ತೆಯಲ್ಲಿ ದೈತ್ಯ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.ಮಳೆಗೆ ವಾಹನ ದಟ್ಟನೆಯ ನಡುವೆ ಮೊಸಳೆ ಓಡಾಡುತ್ತಿರುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.ರತ್ನಗಿರಿ ಜಿಲ್ಲೆಯ ಚಿಪ್ಲುನ್ ಮತ್ತು ಇತರ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಮಳೆಯಾಗುತ್ತಿದೆ. ಸಮೀಪದ ಶಿವನದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮೊಸಳೆಗಳಿದ್ದು, ಕಳೆದ ಕೆಲ ದಿನಗಳಿಂದ ಸುರಿದ ಮಳೆಗೆ ಮೊಸಳೆ ರಸ್ತೆಗೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ನದಿಗಳ ನೀರಿನ ಮಟ್ಟವೂ ಹೆಚ್ಚಿದೆ. ಹವಾಮಾನ ಇಲಾಖೆ ಪ್ರಕಾರ ರತ್ನಗಿರಿ ಜಿಲ್ಲೆಯಲ್ಲಿ ಜುಲೈ ೨ರವರೆಗೆ ಮಳೆ ಮುಂದುವರೆಯಲಿದೆ ಎಂದು ವರದಿಯಾಗಿದೆ.