ಟೀಮ್ ಇಂಡಿಯಾ ಸಾಧನೆ, ಮೋದಿ ಶ್ಲಾಘನೆ
ನವದೆಹಲಿ,ಜೂ.೩೦- ಬರೋಬ್ಬರಿ ೧೭ ವರ್ಷದ ಬಳಿಕ ಟಿ-೨೦ ವಿಶ್ವಕಪ್ ಪ್ರಶಸ್ತಿಗೆ ಮುತ್ತಿಟ್ಟ ಟೀಮ್ ಇಂಡಿಯಾ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಕ್ತಕಂಠದಿಂದ ಅಭಿನಂಧಿಸಿದ್ದಾರೆ. ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಆಟಗಾರರ ಅಮೂಲ್ಯ ಕೊಡುಗೆಯನ್ನು ಅವರು ಶ್ಲಾಘಿಸಿದ್ದಾರೆ.
ಐಸಿಸಿ ಟಿ-೨೦ ವಿಶ್ವಕಪ್‌ನ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್‌ಗಳ ಜಯ ಸಾಧಿಸಿ ಎರಡನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತೀಯ ಕ್ರಿಕೆಟ್ ತಂಡದ ಸದಸ್ಯರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಅಭಿನಂದಿಸಿದ್ದಾರೆ
ರೋಹಿತ್ ಶರ್ಮಾ ಅವರ ಅದ್ಭುತ ನಾಯಕತ್ವ ನಿಭಾಯಿಸಿದ್ದಕ್ಕೆ ಪ್ರಧಾನ ಮಂತ್ರಿ ಶ್ಲಾಘಿಸಿದ್ದು ಜೊತೆಗೆ ಟಿ-೨೦ ವೃತ್ತಿ ಜೀವನಕ್ಕೆ ಶುಭ ಹಾರೈಸಿದ್ದಾರೆ
ಅಂತಿಮ ಪಂದ್ಯದಲ್ಲಿ ೭೬ ರನ್ ಗಳಿಸಿದ ವಿರಾಟ್ ಕೊಹ್ಲಿ ಮತ್ತು ಭಾರತೀಯ ಕ್ರಿಕೆಟ್‌ಗೆ ನೀಡಿದ ಕೊಡುಗೆಗಳನ್ನು ಪ್ರಧಾನಿ ಮೋದಿ ವಿಶೇಷವಾಗಿ ಉಲ್ಲೇಖಿಸಿ ಅಭಿನಂಧನೆ ಸಲ್ಲಿಸಿದ್ಧಾರೆ. ಭಾರತದ ಗೆಲುವಿನ ನಂತರ ಮುಖ್ಯ ಕೋಚ್ ಸ್ಥಾನದಿಂದ ಕೆಳಗಿಳಿದ ರಾಹುಲ್ ದ್ರಾವಿಡ್ ಅವರು ಭಾರತೀಯ ಕ್ರಿಕೆಟ್‌ಗೆ ನೀಡಿದ ಕೊಡುಗೆಗಾಗಿ ಅವರ ಕೆಲಸಕ್ಕೆ ಧನ್ಯವಾದ ಸಲ್ಲಿಸಿದ್ದಾರೆ ಅರ್ಪಿಸಿದರು.
ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಕೊನೆಯ ಓವರ್‍ನಲ್ಲಿ ತೋರಿದ ಅದ್ಬುತ ಪ್ರದರ್ಶನ ಮತ್ತು ಸೂರ್ಯಕುಮಾರ್ ಯಾದವ್ ಅವರು ಡೇವಿಡ್ ಮಿಲ್ಲರ್ ಅವರನ್ನು ಔಟ್ ಮಾಡಲು ಹಿಡಿದ ಕ್ಯಾಚ್ ಬಗ್ಗೆ ಉಲ್ಲೇಖಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಟಿ-೨೦ ವಿಶ್ವಕಪ್ ಮತ್ತು ಭಾರತೀಯ ಕ್ರಿಕೆಟ್‌ಗೆ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಕೊಡುಗೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಇಡೀ ಭಾರತೀಯ ಕ್ರಿಕೆಟ್ ತಂಡಕ್ಕೆ ಮೆಚ್ಚುಗೆ ಮಾತನಾಡಿ ಅಭಿನಂಧನೆ ಸಲ್ಲಿಸಿದ್ದಾರೆ
ಎರಡನೇ ಬಾರಿಗೆ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಳ್ಳುತ್ತಿದ್ದಂತೆ ವಿಡಿಯೋ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಟಿ-೨೦ ವಿಶ್ವಕಪ್ ಕ್ರಿಕೆಟ್‌ನಲ್ಲಿ ಭಾರತ ಚಾಂಪಿಯನ್ ಆಡಿದೆ. ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಪಡುತ್ತೇವೆ. ಈ ಪಂದ್ಯ ಐತಿಹಾಸಿಕವಾಗಿತ್ತು” ಎಂದು ಹೇಳಿದ್ದಾರೆ
ಟಿ-೨೦ ಚೊಚ್ಚಲ ಆವೃತ್ತಿ ೨೦೦೭ ರಲ್ಲಿ ನಡೆದಾಗ ಪ್ರಶಸ್ತಿ ಪಡೆದಿದ್ದ ಭಾರತ ೧೭ ವರ್ಷಗಳಲ್ಲಿ ಭಾರತಕ್ಕೆ ಇದು ಎರಡನೇ ಟಿ-೨೦ ವಿಶ್ವಕಪ್ ಗೆಲುವು ತನ್ನದಾಗಿಸಿಕೊಂಡಿದೆ. ಜೊತೆಗೆ ೧೧ ವರ್ಷಗಳ ನಂತರ ಟೀಮ್ ಇಂಡಿಯಾ ಪ್ರಮುಖ ಐಸಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು, ಕೊನೆಯದಾಗಿ ೨೦೧೩ ರಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಕ್ಕಿತ್ತು.