ಸಿಎಂ ಬದಲು ಚರ್ಚೆ ಅನಗತ್ಯ
ಬೆಳಗಾವಿ.ಜೂ.೩೦ ಸಿಎಂ ಹುದ್ದೆ ಖಾಲಿ ಇಲ್ಲದಿರುವಾಗ ಸಿಎಂ ಬದಲಾವಣೆ ಚರ್ಚೆ ಅನಗತ್ಯ ಅನವಶ್ಯಕ ಎಂದು ಸಮಾಜ ಕಲ್ಯಾಣ ಸಚಿವ ಡಾಎಚ್. ಸಿ ಮಹದೇವಪ್ಪ ಹೇಳಿದರು.
ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಕಾಂಗ್ರೆಸ್ ಎಲ್ಲ ಶಾಸಕರ ಅಭಿಪ್ರಾಯದ ಮೇರೆಗೆ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದಾರೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲದಿರುವಾಗ ಈ ಬಗ್ಗೆ ಚರ್ಚೆ ಅನವಶ್ಯಕ ಎಂದರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಒಕ್ಕಲಿಗ ಮಹ ಸಂಸ್ಥಾನ ಮಠದ ಚಂದ್ರಶೇಖರ ನಾಥ ಸ್ವಾಮೀಜಿಯವರ ಹೇಳಿಕೆಗೆ ಪ್ರತಿಕ್ರಿಸಿದ ಅವರು ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಐದು ವರ್ಷ ಅಧಿಕಾರ ನಡೆಸಲು ಜನ ದೇಶ ನೀಡಿದ್ದಾರೆ ಅದರಂತೆ ಕಾಂಗ್ರೆಸ್ ಹೈಕಮಾಂಡ್ ವೀಕ್ಷಕರನ್ನು ರಾಜ್ಯಕ್ಕೆ ಕಳುಹಿಸಿ ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ ಹೀಗಿರುವಾಗ ಸಿಎಂ ಬದಲಾವಣೆ ಚರ್ಚೆ ಅನವಶ್ಯಕ ಎಂದರು.
ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡುವಾಗ ಹೈಕಮಾಂಡ್ ಮಟ್ಟದಲ್ಲಿ ಏನೇನು ಚರ್ಚೆ ನಡೆದಿದೆ ಎಂಬುದು ಬಹಿರಂಗಪಡಿಸಲು ಸಾಧ್ಯವಿಲ್ಲ ಸದ್ಯಕ್ಕಂತೂ ಮುಖ್ಯಮಂತ್ರಿ ಬದ್ಲಾವಣೆ ಚರ್ಚೆ ಅನಾವಶ್ಯಕ ಅನಗತ್ಯ ಎಂದು ಪುನರುಚ್ಚರಿಸಿದರು ಮುಖ್ಯಮಂತ್ರಿ ಬದಲಾವಣೆ ಡಿಸಿಎಂ ಹುದ್ದೆ ಸೃಷ್ಟಿ ಎಲ್ಲ ವಿಚಾರಗಳ ಬಗ್ಗೆ ಹೈಕಮಾಂಡ್ ತೀರ್ಮಾನವೇ ಅಂತಿಮವಾಗುತ್ತದೆ ಎಲ್ಲವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು ಎಲ್ಲ ವಿಚಾರಗಳು ಪಕ್ಷದ ಆಂತರಿಕವಾಗಿ ಚರ್ಚೆ ಆಗಬೇಕೆ ಹೊರತು ಬಹಿರಂಗವಾಗಿ ಚರ್ಚೆಯಾಗುವುದು ಸರಿಯಲ್ಲ ಎಂದು ಅವರು ಹೇಳಿದರು ಎರಡು ದಿನಗಳ ಹಿಂದೆ ದೆಹಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಾವು ಸೇರಿದಂತೆ ಕೆಲಸ ಸಚಿವರು ಹೋಗಿದ್ದ ಸಂದರ್ಭದಲ್ಲಿ ಹೈಕಮಾಂಡ್ ಮುಂದೆ ಯಾವುದೇ ರೀತಿಯ ವಿಚಾರಗಳು ಚರ್ಚೆಯಾಗಿಲ್ಲ ಎಂದು ಸಚಿವ ಡಾ. ಎಚ್ ಸಿ ಮಹದೇವಪ್ಪ ಸ್ಪಷ್ಟಪಡಿಸಿದರು ವೈಕಮಂಡ್ ಬೇಟಿ ಸಂಧರ್ಭದಲ್ಲಿ ಪಕ್ಷದ ಸಂಘಟನೆ ರಾಜ್ಯದ ಅಭಿವೃದ್ಧಿ ವಿಚಾರಗಳಷ್ಟೇ ಚರ್ಚೆಯಾಗಿದೆ ಎಂದು ಹೇಳಿದರು