ಶೀಘ್ರ ನೀಟ್ ಪಿಜಿ, ಪರೀಕ್ಷಾ ವೇಳಾ ಪಟ್ಟಿ
ನವದೆಹಲಿ, ಜೂ.೩೦- ನೀಟ್-ಪಿಜಿಯ ಹೊಸ ವೇಳಾಪಟ್ಟಿಯನ್ನು ಶೀಘ್ರವಾಗಿ ರಾಷ್ಟ್ರೀಯ ಪರೀಕ್ಷಾ ಮಂಡಳಿ ಪ್ರಕಟಿಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಪಂಚಕುಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ, ಸ್ನಾತಕೋತ್ತರ ಪದವಿಯ ದಿನಾಂಕವನ್ನು ಒಂದು ಅಥವಾ ಎರಡು ದಿನಗಳಲ್ಲಿ ಪ್ರಕಟಿಸುತ್ತದೆ ಎಂದು ತಿಳಿಸಿದರು.
ಇನ್ನೂ, ಅಭ್ಯರ್ಥಿಗಳು hಣಣಠಿs://ಟಿಚಿಣboಚಿಡಿಜ.eಜu.iಟಿ/ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಡೌನ್ಲೋಡ್ ಮಾಡಬಹುದು. ನೀಟ್-ಪಿಜಿ ೨೦೨೪ ೨೦೨೪-೨೫ರ ಶೈಕ್ಷಣಿಕ ಅಧಿವೇಶನಕ್ಕೆ ಎಂಡಿ, ಎಂಎಸ್, ಪಿಜಿ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕಾಗಿ ಏಕ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಾಗಿದೆ.
ಪರೀಕ್ಷೆಯ ಪಠ್ಯಕ್ರಮವು ಭಾರತ ಸರ್ಕಾರದ ಪೂರ್ವಾನುಮತಿಯೊಂದಿಗೆ ಹಿಂದಿನ ಭಾರತೀಯ ವೈದ್ಯಕೀಯ ಮಂಡಳಿ ಹೊರಡಿಸಿದ ಪದವೀಧರ ವೈದ್ಯಕೀಯ ಶಿಕ್ಷಣ ನಿಯಮಗಳ ಪ್ರಕಾರ ವಿಷಯ, ಜ್ಞಾನ ಪ್ರದೇಶವನ್ನು ಒಳಗೊಂಡಿರುತ್ತದೆ.
ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ ನೀಟ್ ಪಿಜಿ ಪರೀಕ್ಷೆ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಿದೆ.