ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಛೇರಿ ಉದ್ಘಾಟನೆ
ಜಯನಗರ.ಜೂ೩೦: ಗ್ಯಾರಂಟಿ ಯೋಜನೆಗಳ ಅನುಷ್ಠಾನ ನ ಸಮಿತಿ ಜಯನಗರ ವಿಧಾನಸಭಾ ಕ್ಷೇತ್ರದ ಕಛೇರಿ ಉದ್ಘಾಟನೆ ಸಮಾರಂಭ.ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರು, ಮಾಜಿ ಶಾಸಕಿ ಸೌಮ್ಯರೆಡ್ಡಿರವರು, ಆಡಳಿತ ಪಕ್ಷದ ಮಾಜಿ ನಾಯಕರು, ಜಯನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಆನುಷ್ಠಾನ ಸಮಿತಿ ಅಧ್ಯಕ್ಷರಾದ ಎನ್.ನಾಗರಾಜು ಉದ್ಘಾಟಿಸಿದರು.
ಸೌಮ್ಯರೆಡ್ಡಿ ಮಾತನಾಡಿ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯಅವರ ನೇತೃತ್ವದಲ್ಲಿ ೫ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ರಾಜ್ಯದಲ್ಲಿ ಜಾರಿಗೆ ಬಂದಿದೆ.ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ಲಾಭ ತಲುಪಿದೆ.
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಿದ್ದಾಂತದಂತೆ ಗ್ಯಾರಂಟಿ ಯೋಜನೆಗಳು ಎಲ್ಲ ವರ್ಗ, ಧರ್ಮದವರಿಗೆ ತಲುಪಿದೆ.ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳು ಮತ್ತು ಮಧ್ಯಮವರ್ಗದ ಜನರಿಗೆ ಆರ್ಥಿಕವಾಗಿ ಸಬಲರಾಗುವಲ್ಲಿ ಗ್ಯಾರಂಟಿ ಯೋಜನೆ ಸಫಲವಾಗಿದೆ.ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ೮,೩೯೪೮೧ ಮತ್ತು ಗೃಹ ಜ್ಯೋತಿ ೩೨,೯೫೧೧೪, ಅನ್ನಭಾಗ್ಯ ೩೧,೫೬,೭೩೪ ಮತ್ತು ಶಕ್ತಿ ಯೋಜನೆ ೯೬.೫೯ಲಕ್ಷ ಹಾಗೂ ಯುವನಿಧಿ ೧೦,೮೦೧ ಗ್ಯಾರಂಟಿ ಯೋಜನೆಯ ಲಾಭ ತಲುಪಿದೆ.ರಾಜ್ಯದಲ್ಲಿರುವ ವಿರೋಧ ಪಕ್ಷಕ್ಕೆ ಗ್ಯಾರಂಟಿ ಯೋಜನೆಯ ಯಶ್ವಸಿ ಸಹಿಕೊಳ್ಳುವುದಕ್ಕೆ ಆಗುತ್ತಿಲ್ಲ.
ಬಡವರ ಪರ ಯೋಜನೆಗಳ ವಿರೋಧಿ ನಿಲುವು ಬಿಜೆಪಿ ಪಕ್ಷವಾಗಿದೆ ಎಂದು ಹೇಳಿದರು.ಗ್ಯಾರಂಟಿ ಯೋಜನೆ ಆನುಷ್ಠಾನ ಸಮಿತಿ ಅಧ್ಯಕ್ಷ ಎನ್.ನಾಗರಾಜು ಬಡವರ ಪರ ಯೋಜನೆಗಳನ್ನು ರೂಪಿಸುವಲ್ಲಿ ಕಾಂಗ್ರೆಸ್ ಪಕ್ಷ ಮೊದಲು.
ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರ ನೇತೃತ್ವದಲ್ಲಿ ೫ ಗ್ಯಾರಂಟಿ ಯೋಜನೆಗಳನ್ನು ಜಯನಗರ ವಿಧಾನಸಭಾ ಕ್ಷೇತ್ರದ ಪ್ರತಿ ಮನೆಗಳಿಗೆ ತಲುಪಿಸಲಾಗಿದೆ.ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತ ಬರಲು ಗ್ಯಾರಂಟಿ ಯೋಜನೆ ಸಹಕಾರಿಯಾಗಿದೆ. ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.