ಡಿಸಿಎಂ ಹುದ್ದೆ ಸೃಷ್ಟಿ ಚರ್ಚೆ ಮಾಹಿತಿಯಿಲ್ಲ
ಬೆಂಗಳೂರು ಜೂ.೩೦ ಮುಖ್ಯಮಂತ್ರಿ ಬದಲಾವಣೆ ಮತ್ತು ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಬಗ್ಗೆ ಬದಲಾವಣೆ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿರುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಿನ್ನೆ ದೆಹಲಿಗೆ ಹೋದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯವರ ಜೊತೆ ಪ್ರತ್ಯೇಕವಾಗಿ ೧೦ ನಿಮಿಷ ಮಾತನಾಡಿದ್ದಾರೆ ಏನು ಮಾತನಾಡಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ ಆ ಸಂದರ್ಭದಲ್ಲಿ ನಾವೆಲ್ಲ ಹೊರಗೆ ಇದ್ದೆವು ಎಂದು ಹೇಳಿದರು ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ರಾಹುಲ್ ಗಾಂಧಿಯವರನ್ನು ಅಭಿನಂದಿಸಲು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲರೂ ಹೋಗಿದ್ದೆವು ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯವರ ಜೊತೆ ೧೦ ನಿಮಿಷ ಪ್ರತ್ಯೇಕ ಚರ್ಚೆ ಮಾಡಿದರು ಎಂದು ಹೇಳಿದರು.
ಇದಕ್ಕೂ ಮೊದಲು ಏಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತನಾಡಿದ್ದೇವೆ ಎಂದು ಹೇಳಿದರು ಯಾವುದೇ ಹುದ್ದೆಯನ್ನು ಬದಲಾವಣೆ ಮಾಡುವುದಿದ್ದರೆ ವರಿಷ್ಠರು ವೀಕ್ಷಕರನ್ನ ಕಳುಹಿಸಿ ಎಲ್ಲ ಶಾಸಕರು ಮುಖಂಡರ ಅಭಿಪ್ರಾಯ ಸಂಗ್ರಹಿಸುತ್ತಾರೆ ನಂತರ ಈ ಬಗ್ಗೆ ತೀರ್ಮಾನಿಸುತ್ತಾರೆ ಸದ್ಯಕ್ಕಂತೂ ಯಾವ ಬದಲಾವಣೆಯು ಇಲ್ಲ ಎಂದು ಅವರು ಹೇಳಿದರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡುವಂತೆ ಸ್ವಾಮೀಜಿಯೊಬ್ಬರು ಬೇಡಿಕೆಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದವರು ಸ್ವಾಮೀಜಿಗಳು ಸಂದರ್ಭ ಸಮಯ ನೋಡಿಕೊಂಡು ಮಾತನಾಡಬೇಕು ಯಾವ ಸಂದರ್ಭದಲ್ಲಿ ಅವರ ಆ ರೀತಿ ಹೇಳಿದ್ದಾರೋ ಗೊತ್ತಿಲ್ಲ ಎಂದರು ಮುಖ್ಯಮಂತ್ರಿ ಹುದ್ದೆ ಬದಲಾವಣೆ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಎಲ್ಲದರ ಬಗ್ಗೆಯೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಹುದ್ದೆಯನ್ನು ನೀಡುವಂತೆ ವಿವಿಧ ಸಮುದಾಯಗಳು ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಸಿದ ಅವರು ವಿವಿಧ ಸಮುದಾಯಗಳು ಬೇಡಿಕೆ ಇಟ್ಟಿವೆ ಯಾವ ಸಮುದಾಯಗಳಿಗೆ ಯಾವ ಹುದ್ದೆ ನೀಡಬೇಕು ಎಂಬುದನ್ನ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಅವರು ಹೇಳಿದರು