ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆಯಾಗುತ್ತಾ:  ಶಾಮನೂರು ಶಿವಶಂಕರಪ್ಪ
ಸಂಜೆವಾಣಿ ವಾರ್ತೆ
ದಾವಣಗೆರೆ.ಜೂ.27; ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆಯಾಗುತ್ತದೆಯೇ ಎಂದು ಹಿರಿಯ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ನಗರದಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರದಿಂದ ಕಂಠೀರವ ಒಳಾಂಗಣ ಕ್ರೀಡಾಂಗಣ ದಲ್ಲಿ  ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭದ ಕಾರ್ಯಕ್ರಮದ ಉದ್ಘಾಟನೆ  ನಂತರ  ಒಕ್ಕಲಿಗ ಸ್ವಾಮೀಜಿಗಳಾದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಮಾಡಬೇಕು ಎಂದು ವೇದಿಕೆಯಲ್ಲಿ ತಿಳಿಸಿದ್ದಾರೆ ಎಂದು ಪ್ರಶ್ನಿಸಿದ ಪತ್ರಕರ್ತರಿಗೆ ಹಿರಿಯ ಶಾಸಕರು ಹೈಕಮಾಂಡ್ ತೀರ್ಮಾನವೇ ಅಂತಿಮ ಅಂದರು. ಶ್ರೀಗಳು ಸಿಎಂ ಬದಲಾವಣೆ ಮಾಡಬೇಕು ಎಂದಿದ್ದಾರೆ. ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಸಾಧ್ಯವೇ ಎಂದು ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರು ಪ್ರಶ್ನಿಸಿದರು. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಬೀಸಿದರು. ಮುಖ್ಯಮಂತ್ರಿಗಳ ಬದಲಾವಣೆಯ ವಿಚಾರ ಹೈ ಕಮಾಂಡ್ ಗೆ ಬಿಟ್ಟಿದ್ದು ನಾವು ಹೇಳೋಕೆ ಸಾಧ್ಯವೆ ಎಂದರು ಅಲ್ಲದೆ ಶಾಸಕ ಶಿವಗಂಗಾ ಬಸವರಾಜ್ ಸಿಎಂ ಬದಲಾವಣೆ ಮಾಡಬೇಕು ಎಂದಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕರು ಅವರಿಗೇನು ಗೊತ್ತು ಯಾರೋ ಚಾರ್ಜ್ ಮಾಡಿ ಹಿಂಗೆ ಹೇಳು ಅಂತಿರಬೇಕು ಎಂದರು. ಜಾತಿವಾರು ಡಿಸಿಎಂ ಕೇಳುತ್ತಿರುವ ವಿಚಾರಕ್ಕೆ ಶಾಸಕರು ಅದೇಲ್ಲಾ ಸುಮ್ನೆ ಆಗಲ್ಲ ಮಾಡಲ್ಲ ಎಂದ ಅವರು ಏನೆ ಮಾಡಿದ್ರು ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದು ಮಾಧ್ಯಮದವರ ಮುಂದೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.