ನಿತೀಶ್ ಪಾದ ಮುಟ್ಟಿದ್ದು ನಾಚಿಕೆಗೇಡಿನ ಸಂಗತಿ
ನವದೆಹಲಿ,ಜೂ.೧೫- ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪಾದ ಮುಟ್ಟಿದ್ದುದು ನಾಚಿಕೆಯಾಗುವ ಸಂಗತಿ ಎಂದು ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ
ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಅಧಿಕಾರ ಉಳಿಸಿಕೊಳ್ಳಲು ನಿತೀಶ್ ಕುಮಾರ್ ತತ್ವ ಸಿದ್ಧಾಂತದಲ್ಲಿ ರಾಜಿ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ
ಭಾಗಲ್ಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ ಅವರು ಅಧಿಕಾರ ಉಳಿಸಿಕೊಳ್ಳಲು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಲೇವಡಿ ಮಾಡಿದ್ದಾರೆ
ಪ್ರಧಾನಿ ಪ್ರಮಾಣ ವಚನಕ್ಕೂ ಮುನ್ನ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ನಿತೀಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರ ಪಾದಗಳನ್ನು ಮುಟ್ಟಲು ಮುಂದಾಗಿದ್ದ ಕ್ರಮ ನಾಚಿಕೆಗೇಡಿನ ಸಂಗತಿ ಎಂದು ಹರಿಹಾಯ್ದಿದ್ದಾರೆ
“ಈ ಹಿಂದೆ ನಿತೀಶ್ ಕುಮಾರ್ ಅವರೊಂದಿಗೆ ಕೆಲಸ ಮಾಡಿದ ನಾನು ಈಗ ಅವರನ್ನು ಏಕೆ ಟೀಕಿಸುತ್ತಿದ್ದೇನೆ ಎಂದು ಜನರು ನನ್ನನ್ನು ಕೇಳುತ್ತಾರೆ. ಅವರು ಆಗ ವಿಭಿನ್ನ ವ್ಯಕ್ತಿಯಾಗಿದ್ದರು. ಅವರ ಆತ್ಮಸಾಕ್ಷಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ” ಈಗ ಅಧಿಕಾರಕ್ಕೆ ಏನು ಬೇಕಾದರೂ ಮಾಡಲು ಹಿಂಜರಿಯದ ವ್ಯಕ್ತಿ ಅವರು ಎಂದು ಆರೋಪಿಸಿದ್ದಾರೆ
“ರಾಜ್ಯದ ನಾಯಕ ಎಂದರೆ ಅದರ ಜನರ ಹೆಮ್ಮೆ. ಆದರೆ ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪಾದಗಳನ್ನು ಮುಟ್ಟುವ ಮೂಲಕ ಬಿಹಾರದ ಜನರಿಗೆ ಅವಮಾನ ಮಾಡಿದ್ದಾರೆ. ಇದನ್ನು ರಾಜ್ಯದ ಜನರು ಎಂದಿಗೂ ಸಹಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ
ನಿತೀಶ್ ಕುಮಾರ್ ಅವರ ಜೆಡಿಯುಲೋಕಸಭಾ ಚುನಾವಣೆಯಲ್ಲಿ ೧೨ ಸ್ಥಾನಗಳನ್ನು ಗೆದ್ದು ಬಿಜೆಪಿಯ ಎರಡನೇ ಅತಿದೊಡ್ಡ ಮಿತ್ರ ಪಕ್ಷವಾಗಿ ಹೊರಹೊಮ್ಮಿದೆ.