ಉಮಾಶಂಕರ್ ಪಾಲಿಕೆಯ ಆಡಳಿತಾಧಿಕಾರಿ
ಬೆಂಗಳೂರು.ಜೂ.೧೨- ಐಎಎಸ್ ಅಧಿಕಾರಿ ಉಮಾಶಂಕರ್ ಎಸ್.ಆರ್, ಅವರನ್ನು ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆಯ ಆಡಳಿತಗಾರರನ್ನಾಗಿ ವರ್ಗಾವಣೆ ಮಾಡಲಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಮಹಾಂತೇಶ್ ಆದೇಶವನ್ನು ಹೊರಡಿಸಿದ್ದಾರೆ. ಐಎಎಸ್ ಅಧಿಕಾರಿ ಉಮಾಶಂಕರ್ ಎಸ್.ಆರ್,
ಈ ಹಿಂದೆ ಗೃಹ ಇಲಾಖೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.