ರೇಣುಕಾಸ್ವಾಮಿ ಕೊಲೆ ಎ1ಪವಿತ್ರಾ ಎ2 ದರ್ಶನ್‌ ಸೇರಿ 13 ಮಂದಿ‌ 3 ದಿನ ಪೊಲೀಸ್‌ ಕಸ್ಟಡಿಗೆ
ರೇಣುಕಾಸ್ವಾಮಿ ಕೊಲೆ ಎ1ಪವಿತ್ರಾ
ಎ2 ದರ್ಶನ್‌ ಸೇರಿ 13 ಮಂದಿ‌ 6 ದಿನ ಪೊಲೀಸ್‌ ಕಸ್ಟಡಿಗೆ
ಬೆಂಗಳೂರು,ಜೂ.11-ಚಿತ್ರದುರ್ಗದ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಮತ್ತವರ ಗೆಳತಿ ನಟಿ ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು 6 ದಿನಗಳ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.
ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಪ್ರಕರಣದ ಮೊದಲ ಆರೋಪಿ ನಟಿ ಪವಿತ್ರಾ ಗೌಡ ಎರಡನೇ ಆರೋಪಿ ನಟ ದರ್ಶನ್ ಸೇರಿ ಎಲ್ಲಾ 13 ಮಂದಿ ಆರೋಪಿಗಳನ್ನು ಇಂದು ಸಂಜೆ ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರ ಮುಂದೆ ಹಾಜರುಪಡಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರೋಪಿಗಳನ್ನು 6 ದಿನಗಳ ಕಾಲ
ಪೊಲೀಸ್‌ ಕಸ್ಟಡಿಗೆ ನೀಡಲು ನ್ಯಾಯಾಧೀಶರು ಆದೇಶ ನೀಡಿದರು.
ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಕಸ್ಟಡಿಗೆ ಕೇಳಲು ರಿಮ್ಯಾಂಡ್ ಅರ್ಜಿಯನ್ನು ಪೊಲೀಸರು ಸಲ್ಲಿಸಿದ್ದರು. ಪೊಲೀಸರ ಪರ ಸರ್ಕಾರಿ ಅಭಿಯೋಜಕ ವಾದ ಮಂಡಿಸಿ, ಸಾಕ್ಷ್ಯಗಳ ನಾಶ ಆಗಿರುವುದರಿಂದ ಎ2 ದರ್ಶನ್‌ ಅವರನ್ನು 14 ದಿನ ಕಸ್ಟಡಿಗೆ ನೀಡುವಂತೆ ಕೋರಿದರು. ಆದರೆ, ದರ್ಶನ್‌ ಪರ ವಕೀಲ 14 ದಿನ ಏಕೆ ಎಂದು ಪ್ರಶ್ನಿಸಿದರು. ಈಗಾಗಲೇ ದರ್ಶನ್‌ ಮೊಬೈಲ್‌ ಸೀಜ್‌ ಆಗಿದೆ, ದರ್ಶನ್‌ ಅವರ ತೇಜೋವಧೆ ಮಾಡಲು ಈ ರೀತಿ ಮಾಡಲಾಗುತ್ತಿದೆ ಹೇಳಿದರು.
ಕಣ್ಣೀರಿಟ್ಟ ದರ್ಶನ್‌:
ಆರೋಪಿಗಳನ್ನು ಕಸ್ಟಡಿಗೆ ನೀಡಲು ಸರ್ಕಾರಿ ಅಭಿಯೋಜಕ ಕೋರಿದರೆ, ದರ್ಶನ್‌ ಪರ ವಕೀಲ ಅವರಿಗೆ ಕಿರುಕುಳ ನೀಡಬಾರದು, ನ್ಯಾಯಾಂಗ ಬಂಧನಕ್ಕೆ ನೀಡಬೇಕು ಎಂದು ಮನವಿ ಮಾಡಿದರು. ವಾದ- ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ಪೊಲೀಸ್‌ ಕಸ್ಟಡಿಗೆ ನೀಡಲು ಸೂಚಿಸಿದರು. ನ್ಯಾಯಾಧೀಶರು ಪೊಲೀಸ್‌ ಕಸ್ಟಡಿಗೆ ಎಂದು ಹೇಳಿದ ಕೂಡಲೇ ನಟ ದರ್ಶನ್‌ ಕಣ್ಣೀರಿಟ್ಟಿದ್ದು ಕಂಡುಬಂತು.
ಹೀಗಾಗಿ ದರ್ಶನ್‌ ಅವರನ್ನು ಕಸ್ಟಡಿಗೆ ನೀಡಲಾಗಿದೆ. ಇದಕ್ಕೂ ಮುನ್ನಾ ಆರೋಪಿಗಳಿಗೆ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಸಿಜಿ, ಬಿ.ಪಿ., ಶುಗರ್‌ ಇನ್ನಿತರ ಪರೀಕ್ಷೆ ಮಾಡಲಾಗಿದ್ದು, ಯಾರಿಗೂ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ. ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಬೌರಿಂಗ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಮತ್ತೊಂದೆಡೆ ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳಕ್ಕೆ ಪೊಲೀಸರು, ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಈ ವೇಳೆ ಕೆಲ ವಸ್ತುಗಳನ್ನು ಎಫ್ಎಸ್ಎಲ್ ತಂಡ ಸಂಗ್ರಹಿಸಿದೆ. ವಸ್ತುಗಳನ್ನು ಸೀಜ್ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಈ ನಡುವೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. ಚಿತ್ರದುರ್ಗದಲ್ಲಿ ಅಂತ್ಯಕ್ರಿಯೆ ಮಾಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.
ಕೊಲೆ ಆರೋಪಿಗಳು:
೧.ನಟ ದರ್ಶನ್
೨.ಪವಿತ್ರಾ ಗೌಡ
೩.ಕೆ. ಪವನ್-ದರ್ಶನ್ ಮನೆಯಲ್ಲಿ ಇರುವ ದರ್ಶನ್ ಅಪ್ತ, ಕಿಡ್ನ್ಯಾಪ್ ಮಾಡಲು ಹೇಳಿದ್ದವನು, ಪವಿತ್ರಗೂ ಆಪ್ತ
೪.ಪ್ರದೋಶ್- ಹೋಟೆಲ್ ಉದ್ಯಮಿ
೫.ನಂದೀಶ್- ಹಲ್ಲೆ ಮಾಡಿದ ಮುಖ್ಯ ವ್ಯಕ್ತಿ, ಕಿಡ್ನ್ಯಾಪ್ ಮಾಡಿಕೊಂಡು ಕರೆತಂದವನು
೬.ಕೇಶವಮೂರ್ತಿ, ಪ್ರದೂಶ್ ಗೆಳೆಯ ಹಾಗೂ ಉದ್ಯಮಿ
೭.ರಾಘವೇಂದ್ರ- ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ
೮.ಎಂ.ಲಕ್ಷ್ಮಣ್
೯. ದೀಪಕ್ ಕುಮಾರ್
೧೦.ಕಾರ್ತಿಕ್
೧೧.ಆರ್.ನಾಗರಾಜ್, ದರ್ಶನ್ ಆಪ್ತ
೧೨.ವಿ.ವಿನಯ್
೧೩. ನಿಖಿಲ್ ನಾಯಕ್