ಪ್ರತಿಭಾ, ಮನಮೋಹನ್, ಹೆಚ್‌ಡಿಡಿ ಆರ್ಶೀವಾದ ಪಡೆದ ಮೋದಿ
ನವದೆಹಲಿ,ಜೂ.೧೧:ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಮಾಜಿ ರಾಷ್ಟ್ರಪತಿ ಪ್ರತಿಭಾಪಾಟೀಲ್, ಮಾಜಿ ಪ್ರಧಾನಿಗಳಾದ ಡಾ. ಮನಮೋಹನ್ ಸಿಂಗ್ ಮತ್ತು ಹೆಚ್.ಡಿ ದೇವೇಗೌಡರ ಆರ್ಶೀವಾದ ಪಡೆದುಕೊಂಡರು.
ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಈ ಮೂವರು ನಾಯಕರಿಗೆ ದೂರವಾಣಿ ಕರೆ ಮಾಡಿ ಆರ್ಶೀವಾದ ಪಡೆದುಕೊಂಡರು. ಅನಾರೋಗ್ಯದ ಕಾರಣದಿಂದಾಗಿ ಹೆಚ್.ಡಿ ದೇವೇಗೌಡರವರು ಜೂ. ೯ ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗಿದ್ದರು.
ಪ್ರತಿಭಾಪಾಟೀಲ್, ಡಾ. ಮನಮೋಹನ್ ಸಿಂಗ್ ಇಬ್ಬರು ಯುಪಿಎ ಸರ್ಕಾರದ ಅವಧಿಯಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಿಯಾಗಿದ್ದರು. ಕಾಂಗ್ರೆಸ್ ಬೆಂಬಲಿತ ಯುನೈಟೆಡ್ ಫ್ರಂಟ್ ಸರ್ಕಾರದಲ್ಲಿ ದೇವೇಗೌಡರು ಪ್ರಧಾನಿಯಾಗಿದ್ದರು.
ಲೋಕಸಭಾ ಚುನಾವಣೆ ಬಳಿಕ ಮೋದಿ ನೇತೃತ್ವದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.