ಪಾಲಿಕೆ ಚುನಾವಣೆಗೆ ಸಿದ್ಧತೆ:5 ಭಾಗಗಳಾಗಿ ವಿಂಗಡಿಸಲು ನಿರ್ಧಾರ
ಬೆಂಗಳೂರು, ಜೂನ್ 10: ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಮುಂದಾಗಿದ್ದು, 5 ಭಾಗಗಳಾಗಿ ವಿಂಗಡಿಸಲು ತೀರ್ಮಾನ ಮಾಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ
ಕಾಂಗ್ರೆಸ್ ಶಾಸಕರ ಜೊತೆ ಸಭೆಯಲ್ಲಿ ಸುದೀರ್ಘ ಚರ್ಚೆಯ ನಂತರ ಈ ತೀರ್ಮಾನ‌ ಕೈಗೊಳ್ಳಲಾಗಿದೆ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿ ನೇತೃತ್ವದಲ್ಲಿ 3 ರಿಂದ 4 ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಚರ್ಚೆ ಆಗಿದೆ. ಮಳೆಗಾಲ ಮುಗಿಯುತ್ತಿದ್ದಂತೆ ಪಾಲಿಕೆ ಚುನಾವಣೆ ಮಾಡುವುದಾಗಿ ಪ್ರಕಟಿಸಿದರು.
ಇನ್ನಷ್ಟು ದಿನಗಳ ಕಾಲ ಚುನಾವಣೆ ಮಂದೂಡಲು ಸಾಧ್ಯವಿಲ್ಲ. ಈಗಾಗಲೇ ಕೋರ್ಟ್ ಚುನಾವಣೆ‌‌ನಡೆಸುವಂತೆ ನಿರ್ದೇಶನ ನೀಡಿದೆ. 225 ವಾರ್ಡ್ಗಳಲ್ಲಿ ಚುನಾವಣೆ ನಡೆಯಲಿದೆ‌ಎಂದರು.
ಕಾನೂನು ತೊಡಕು ಹಾಗೂ ಮೀಸಲಾತಿ ಬಗೆ ಹರಿಸಿ ಚುನಾವಣೆ ಮಾಡುತ್ತೇವೆ. ಅನುದಾನ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ. ಲೋಕಸಭಾ ಚುನಾವಣೆ ಫಲಿತಾಂಶದ ಸೋಲಿನ ಚರ್ಚೆ ಆಗಿಲ್ಲ. ಈ‌ ಬಗ್ಗೆ ಯಾರು‌ ಮಾತನಾಡಲಿಲ್ಲ. ಕೇವಲ ಬಿಬಿಎಂಪಿ ಚುನಾವಣೆ ಬಗ್ಗೆ ಮಾತ್ರ ಚರ್ಚೆ ನಡೆಯಿತು ಎಂದು ಅವರು ಸ್ಪಷ್ಟಪಡಿಸಿದರು.
ಗ್ಯಾರಂಟಿ ಯೋಜನೆ ನಿಲ್ಲಲ್ಲ
ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ. ಮತ್ತೆ ಚುನಾವಣೆ ನಡೆದರೂ ರಾಜ್ಯದಲ್ಲಿ ಕಾಂಗೆಸ್ ಅಧಿಕಾರಕ್ಕೆ ಬರಲಿದೆ ಎಂದ ಸಚಿವರು, ಮುಂದಿನ 9 ವರ್ಷವೂ ಗ್ಯಾರಂಟಿ ಇರಲಿದೆ. ಶಕ್ತಿ ಯೋಜನೆಗೆ ಇಂದು ವರ್ಷ ಪೂರೈಸಿದೆ ಎಂದು ವಿವರಿಸಿದರು.