ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ
ನವದೆಹಲಿ, ಜೂ. ೧೦- ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ಮತ್ತೊಮ್ಮೆ ಕೆಲಸ ಮಾಡಲು ಅವಕಾಶ ಲಭಿಸಿರುವುದು ತಮ್ಮ ಸೌಭಾಗ್ಯ ಎಂದು ಕೇಂದ್ರ ಸಚಿವೆ ಶೋಭಕರಂದ್ಲಾಜೆ ಹೇಳಿದ್ದಾರೆ.
ಕೇಂದ್ರ ಸಚಿವರಾಗಿ ನಿನ್ನೆಯಷ್ಟೇ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ದೆಹಲಿಯಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ೨೦೪೭ ವಿಕಸಿತ ಭಾರತದ ಸಂಕಲ್ಪದೊಂದಿಗೆ ಮೋದಿಯವರು ಪ್ರಧಾನಿ ಹುದ್ದೆ ಅಲಂಕರಿಸಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ ದೇಶವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಕಟಿದ್ಧರಾಗಿದ್ದಾರೆ ಎಂದರು.
ರಾಜ್ಯದಿಂದ ೫ ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ. ದೇಶದ ಪ್ರಗತಿಗಾಗಿ ಅಲ್ಪ ಕಾಣಿಕೆ ನೀಡುವುದಾಗಿ ಅವರು ಹೇಳಿದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ತಾವು ಹೊಸಬರಾದರೂ ಕ್ಷೇತ್ರದ ಜನತೆಗೆ ಋಣಿಯಾಗಿದ್ದೇನೆ. ತಮ್ಮ ಗೆಲುವಿಗೆ ಶ್ರಮಿಸಿದ ಮುಖಂಡರು, ಕಾರ್ಯಕರ್ತರಿಗೆ ಶೋಭ ಅವರು ಧನ್ಯವಾದ ಸಮರ್ಪಿಸಿದ್ದಾರೆ.