ಮಾದಕ ವಸ್ತು ವಿರೋಧಿ ದಿನಾಚರಣೆ
ಸಂಜೆವಾಣಿ ವಾರ್ತೆ
ಸಿರುಗುಪ್ಪ, ಜೂ.30: ಇಂದಿನ ದಿನಮಾನಗಳಲ್ಲಿ ಪ್ರೌಡಾವಸ್ತೆಯ ಮಕ್ಕಳು ಮಾದಕ ವಸ್ತುಗಳ ಸೇವನೆಗೆ ಮಾರುಹೋಗುತ್ತಿದ್ದು, ಆತಂಕದ ಸಂಗತಿಯಾಗಿದೆ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಸುಧೀರ್ ಹಂಗಳೂರು ತಿಳಿಸಿದರು.
ನಗರದ ಯಲ್ಲಮ್ಮದೇವಿ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಳ್ತಂಗಡಿ ಮದ್ಯಪಾನ ಸಂಯಮ ಮಂಡಳಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ
ಮಾತನಾಡಿದ ಅವರು ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೌಢಾವಸ್ಥೆಯ ಮಕ್ಕಳಲ್ಲಿ ಈ ಬಗ್ಗೆ ಸೂಕ್ತ ತಿಳುವಳಿಕೆ ಮತ್ತು ಸಮಾಲೋಚನೆ ಮಾಡುವ ಮೂಲಕ ಉತ್ತಮ ಸಮಾಜ‌ ನಿರ್ಮಾಣಕ್ಕಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆಯವರು ಅನೇಕ
ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆಂದು ಹೇಳಿದರು.
ಸಂಪನ್ಮೂಲವ್ಯಕ್ತಿ ಸರೋಜ, ಮಾದಕ ವಸ್ತು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಮುಖ್ಯಗುರು ವೈ.ನಂದಿನಿ, ಮೇಲ್ವಿಚಾರಕಿ ಚಂದ್ರಕಲಾ, ಸೇವಾ ಪ್ರತಿನಿದಿಗಳಾದ ಭವಾನಿ, ಕಲ್ಪನ ಮತ್ತು ವಿದ್ಯಾರ್ಥಿಗಳು ಇದ್ದರು.