ಅಕ್ರಮ ಪಡಿತರ ಅಕ್ಕಿ ವಶ
ಸಂಜೆವಾಣಿ ವಾರ್ತೆ
ಸಿರುಗುಪ್ಪ, ಜೂ.30: ತಾಲ್ಲೂಕಿನ ಗೋಸಬಾಳು ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ  ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಸಿರಿಗೇರಿ ಪೊಲೀಸ್ ಠಾಣೆಯ ಎ ಎಸ್ ಐ ಶ್ರೀನಿವಾಸ ನೇತೃತ್ವದ ತಂಡ ದಾಳಿ ನಡೆಸಿ 26100  ಮೌಲ್ಯದ 25 ಚೀಲದಲ್ಲಿ 9ಕ್ವಿಂಟಾಲ್ ಪಡಿತರ ಅಕ್ಕಿಯನ್ನು  ಗೋಸಬಾಳ ಗ್ರಾಮ ಈಶ್ವರ ಗುಡಿ ಹತ್ತಿರ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಹೋಳಗುಂದ ಗ್ರಾಮದ ಪಂಚಣ್ಣ ಇವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಸಿರುಗುಪ್ಪ ಆಹಾರ ನಿರೀಕ್ಷಕ ಮಹಾರುದ್ರಗೌಡ ಹಾಜರಿದ್ದರು. ಸಿರಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.