ಯೋಜನಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಸಂಜೆವಾಣಿ ವಾರ್ತೆ
ಹೊಸಪೇಟೆ, ಜೂ.30: ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲೆಗಳ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಗೆ ಶನಿವಾರ ಆಗಮಿಸಿದ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್ ಅವರನ್ನು ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎನ್. ಮಹಮ್ಮದ್ ಇಮಾಮ್ ನಿಯಾಜಿ ಅವರು ಭೇಟಿ ಮಾಡಿ ನಗರದ ಅಭಿವೃದ್ಧಿ ಕುರಿತು ಚರ್ಚಿಸಿದರು.
ಇದೇ ವೇಳೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಶೇ. 50:50 ಅನುಪಾತದ ವಸತಿ ಯೋಜನೆಗೆ ಅನುಮತಿಗಾಗಿ ಹಾಗೂ ಹೊಸಪೇಟೆ ಸ್ಥಳೀಯ ಯೋಜನಾ ಪ್ರದೇಶಕ್ಕೆ ಮಹಾಯೋಜನೆ ಶೀಘ್ರವಾಗಿ ತಯಾರಿಸುವ ಕುರಿತು ಮತ್ತು ಪ್ರಾಧಿಕಾರ ವ್ಯಾಪ್ತಿಯ ವಿವಿಧ ಅಭಿವದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿದರು.