ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಲು ಕರೆ
ತುಮಕೂರು, ಜೂ. ೩೦- ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯಲ್ಲಿ ಹೂಡಿಕೆ ಸಮಾರಂಭ ಏರ್ಪಡಿಸಲಾಗಿತ್ತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಸುನಿತ ದುಗ್ಗಲ್ ಮಾತನಾಡಿ, ನಾಯಕತ್ವ ಗುಣದ ನಿಯಮಗಳು ಮತ್ತು ಅವರ ಜವಾಬ್ದಾರಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಯನಗರ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಮಹಾಲಕ್ಷ್ಮಮ್ಮ, ವಿವಿಧ ವರ್ಗಕ್ಕೆ ಆಯ್ಕೆಯಾದ ತಂಡದ ನಾಯಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಬ್ಯಾಡ್ಜ್ ತೊಡಿಸುವ ಮೂಲಕ ಶುಭ ಹಾರೈಸಿದರು.
ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳಸಿಕೊಳ್ಳುವುದರ ಜತೆಗೆ ನಾಯಕನಾದವರು ಮುಖ್ಯವಾಗಿ ಪಾಲಿಸಬೇಕಾದ ಅಂಶಗಳ ಬಗ್ಗ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯಾಚರಣೆ ನಿರ್ವಾಹಕ ಬಸವರಾಜು ಸೇರಿದಂತೆ ಶಿಕ್ಷಕರು ಉಪಸ್ಥಿತರಿದ್ದರು.